ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡನ ಹತ್ಯೆ, ಮತ್ತೊಂದು ಕೇರಳವಾಗುತ್ತಿದೆಯಾ ಕರ್ನಾಟಕ?
ರಾಜ್ಯದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮುಂದುವರಿದಿದ್ದು, ಕರ್ನಾಟಕದಲ್ಲಿ ಆಳುವವರು ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದಾರೋ ಇಲ್ಲವೋ ಎಂಬ ಅನುಮಾನ ಶುರುವಾಗಿದೆ. ಅಲ್ಲದೆ ಕೇರಳ ಮಾದರಿಯಲ್ಲೇ ರಾಜ್ಯದಲ್ಲಿ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗಳಾಗುತ್ತಿರುವುದು ಆತಂಕ ಮೂಡಿಸಿದೆ.
ಹೌದು, ಶುಕ್ರವಾರ ರಾತ್ರಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಎಂಬುವವರನ್ನು ಗೌರಿ ಕಾಲುವೆ ಬಳಿ ಹತ್ಯೆ ಮಾಡಲಾಗಿದ್ದು, ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲವೇ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಗೌರಿ ಕಾಲುವೆ ಬಳಿ 44 ವರ್ಷದ ಮೊಹಮ್ಮದ್ ಅನ್ವರ್ ಬೈಕಿನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿದ ದುಷ್ಕರ್ಮಿಗಳು, ಬೈಕಿನಲ್ಲಿ ಬಂದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ದೇಶಾದ್ಯಂತ ಬಿಜೆಪಿ ಯುವ ಮುಖಂಡರ ಹತ್ಯೆ ಜಾಸ್ತಿಯಾಗಿತ್ತು. ಒಂದು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡರೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ರಾಜ್ಯದಲ್ಲಿ ಕಳೆದ ತಿಂಗಳು ಯುವ ಮುಖಂಡರೊಬ್ಬರ ಹತ್ಯೆಯಾಗಿತ್ತು. ಅದರಲ್ಲೂ ಬಿಜೆಪಿಯೇತರ ಸರ್ಕಾರವಿರುವ ರಾಜ್ಯದಲ್ಲೇ ಬಿಜೆಪಿ ಹತ್ಯೆಯಾಗುತ್ತಿರುವುದು ಹಲವು ಶಂಕೆ ಮೂಡಿಸಿದೆ.
Leave A Reply