ಕಾರಿಗೆ ಸೊಂಡಿಲಿನಿಂದ ಹೊಡೆದ ಕಾಡಾನೆ: ಕಾರು ಜಖಂ
Posted On June 23, 2018
0
ಪುತ್ತೂರು: ಕಾಡಾನೆಯೊಂದು ಕಾರಿಗೆ ಸೊಂಡಿಲಿನಿಂದ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡು, ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಮಾರುತಿ ಓಮ್ನಿ ಕಾರು ಬಿಳಿನೆಲೆ ಸಿ.ಪಿ.ಸಿ.ಆರ್.ಐ ಸಮೀಪ ತಲುಪಿದಾಗ ಕಾಡಾನೆಯೊಂದು ರಸ್ತೆಯನ್ನು ಹಾದುಹೋಗುತ್ತಿರುವುದನ್ನು ಕಂಡ ಚಾಲಕ ಆನೆಯ ಸಮೀಪದಲ್ಲೇ ಕಾರನ್ನು ನಿಲ್ಲಿಸಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕಾಡಾನೆಯು ಹಿಂತಿರುಗಿ ಬಂದು ಸೊಂಡಿಲಿನಿಂದ ಕಾರಿಗೆ ಹಾನಿಯುಂಟು ಮಾಡಿದೆ. ಈ ಸಂದರ್ಭದಲ್ಲಿ ಬಸ್ಸೊಂದು ಹಾರ್ನ್ ಹಾಕುತ್ತಾ ಬಂದ ಕಾರಣ ಕಾಡಾನೆ ಕಾರನ್ನು ಬಿಟ್ಟು ಓಡಿ ಹೋಗಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಇನ್ನುಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ
Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
December 23, 2025









