ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Posted On June 24, 2018

ಪುಂಜಾಲಕಟ್ಟೆ : ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಸಮೀಪದ ನಾಕ್ನಾಡ್ ನಿವಾಸಿ ಪ್ರಶಾಂತ್(೨೭) ಎಂದು ಗುರುತಿಸಲಾಗಿದೆ. ಇಂದು ಬೆಳ್ಳಿಗ್ಗೆ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಕಲಾವಿದನಾಗಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -
Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
September 27, 2023
Leave A Reply