ಆಪ್ತ ಶಾಸಕರ ಜೊತೆ ರಹಸ್ಯ ಸಭೆ ನಡೆಸಿದ ಸಿದ್ದರಾಮಯ್ಯ!
ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕರ ಜೊತೆ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅಲ್ಲಿಯೇ ಆಪ್ತ ಶಾಸಕರ ಜೊತೆ ಅವರು ಸಭೆ ನಡೆಸಿದ್ದು, ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ಸಿದ್ದರಾಮಯ್ಯ ಅವರು ಶಾಸಕರ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಶಾಸಕರಾದ ಬೈರತಿ ಬಸವರಾಜು, ಮುನಿರತ್ನ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದರು. ಆಗ ಶಾಸಕರ ಜೊತೆ ಅವರು ಸಭೆ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದಿದ್ದರು. ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ ಎಂಬ ಸುದ್ದಿಯೂ ಇದೆ. ಆದ್ದರಿಂದ, ಸಿದ್ದರಾಯ್ಯ ಸಭೆಯಲ್ಲಿ ಏನು ಚರ್ಚೆ ನಡೆಸಿರಬಹುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 10 ದಿನಗಳ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಅವರು ಶಾಂತಿವನಕ್ಕೆ ದಾಖಲಾಗಿದ್ದಾರೆ. ಕಳೆದ ವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈಗ ಶಾಸಕರು ಭೇಟಿ ಮಾಡಿ, ಸಭೆ ನಡೆಸಿದ್ದಾರೆ.
Leave A Reply