ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ದಾಳಿ: 80 ಲೋಡ್ ಮರಳು ವಶ
Posted On June 25, 2018

ಮಂಗಳೂರು: ಖಾಸಗಿ ಸ್ಥಳದಲ್ಲಿನ ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪೊಲೀಸರು ಪತ್ತೆ ಹಚ್ಚಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ತಾಲೂಕಿನ ತಿರುವೈಲ್ ಗ್ರಾಮದ ದೇವರಪದವು ಎಂಬಲ್ಲಿ ಪೊಲೀಸರು ಸುಮಾರು 80 ಲೋಡ್‌ನಷ್ಟು ಮರಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ನಿರೀಕ್ಷಕರು, ಸಿಬ್ಬಂದಿ ಜೊತೆ, ಜಂಟಿಯಾಗಿ ದಾಳಿ ಮಾಡಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಮರಳನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ವಿಭಾಗದ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯನ್ನು ನಗರದ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ನಡೆಸಲಾಯಿತು ಎಂದು ತಿಳಿದು ಬಂದಿದೆ.
- Advertisement -
Trending Now
“ನಾನು ಪಾಳೇಗಾರ ಅಲ್ಲ, ಕ್ಷೇತ್ರದ ಕಾವಲುಗಾರ!“ -ವೇದವ್ಯಾಸ ಕಾಮತ್ ಕಿಡಿ
February 17, 2025
Leave A Reply