• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಹತ್ವ ಪಡೆದುಕೊಂಡ ಸಿದ್ದರಾಮಯ್ಯ-ಪರಮೇಶ್ವರ್ ರಹಸ್ಯ ಮಾತುಕತೆ

Tulunadu News Posted On June 25, 2018
0


0
Shares
  • Share On Facebook
  • Tweet It

ಮಂಗಳೂರು : ರಾಜ್ಯ ರಾಜಕೀಯದಲ್ಲಿ ಹಲವಾರು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನೂತನ ಮೈತ್ರಿ ಸರ್ಕಾರದ ಬಜೆಟ್ ಮಂಡನೆಯ ದಿನ ಹತ್ತಿರವಾಗುತ್ತಿದ್ದಂತೆ ರಾಜಕೀಯ ವಯಲದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಮಹತ್ವ ಪಡೆಯುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಗೆ ಮೊರೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಏಕಾಏಕಿ ರಾಜಕೀಯವಾಗಿ ಚುರುಕಾಗಿದ್ದಾರೆ. ಒಬ್ಬರ ಹಿಂದೆ ಮತ್ತೊಬ್ಬರಂತೆ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ಹಾಗೂ ಚರ್ಚೆ ನಡೆಸುತ್ತಿರುವ ಸಿದ್ದರಾಮಯ್ಯ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರ ರಾಜಕೀಯ ಶಕ್ತಿ ಕೇಂದ್ರವಾಗಿ ಬದಲಾಗಿದೆ. ಭಾನುವಾರ ಏಕಾಏಕಿ ಉಪಮುಖ್ಯಮಂತ್ರಿ ಡಾ .ಜಿ ಪರಮೇಶ್ವರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಿ. ಪರಮೇಶ್ವರ್ ನೇರವಾಗಿ ಧರ್ಮಸ್ಥಳಕ್ಕೆ ತೆರಳಿದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪರಮೇಶ್ವರ್ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಂತರ ಶಾಂತಿವನಕ್ಕೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪರಮೇಶ್ವರ್ ರಹಸ್ಯ ಮಾತುಕತೆ ನಡೆಸಿರುವುದು ಈಗ ಮಹತ್ವ ಪಡೆದಿದೆ. ಪ್ರಕೃತಿ ಚಿಕಿತ್ಸಾಲಯದ ಕೊಠಡಿಯಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ಗಂಟೆ ಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಇತರ ಯಾವುದೇ ನಾಯಕರಿಗೆ ಕೊಠಡಿಯೊಳಗೆ ಪ್ರವೇಶ ಇರಲಿಲ್ಲ. ಚರ್ಚೆ ಸಂದರ್ಭದಲ್ಲಿ ಸಾಲಮನ್ನಾ, ನಿಗಮ ಮಂಡಳಿ ವಿಚಾರದಲ್ಲಿ ನಿರ್ಣಾಯಕ ಮಾತುಕತೆ ನಡೆದಿದೆ. ಅದಲ್ಲದೇ ಕೆಲ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search