ಮಂಗಳೂರು. ಅಕ್ರಮ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ, ಬಂಧನ
Posted On June 25, 2018

ಮಂಗಳೂರು: ಅಕ್ರಮ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ 51 ಮಂದಿಯನ್ನು ವಶಕ್ಕೆ ಪಡೆದ ಘಟನೆ ಮಂಗಳೂರಿನ ಬಿಜೈನ ಕೆ ಎಸ್ ಸರ್ ಟಿ ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಮಾರ್ಗದರ್ಶನದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಜೂಜಾಟಕ್ಕೆ ಬಳಸಿದ್ದ 1,19,300 ರೂ. ನಗದು ಹಾಗೂ 40 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 1,68,700 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
Leave A Reply