• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಂಟ್ವಾಳ: ಭಾರಿ ಮಳೆಗೆ ಮುರಿದು ಬಿದ್ದ ಹೆದ್ದಾರಿ ಸೇತುವೆ

Tulunadu News Posted On June 26, 2018


  • Share On Facebook
  • Tweet It

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಬಂಟ್ವಾಳದಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಬಂಟ್ವಾಳ-ಕುಪ್ಪೆಪದವು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಮೂಲರಪಟ್ನ ಎಂಬಲ್ಲಿ ಫಲ್ಗುಣಿ ನದಿಗೆ ಕಟ್ಟಲಾಗಿದ್ದ ಸೇತುವೆ ಏಕಾಏಕಿ ಕುಸಿದು ಬಿದ್ದಿದೆ.

ಸುಮಾರು 35 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಸೇತುವೆ ಕುಸಿಯುವ ಭೀತಿಯನ್ನು ಸ್ಥಳಿಯ ನಿವಾಸಿಗಳು ವ್ಯಕ್ತಪಡಿಸಿದ್ದರು . ಈ ವಿಚಾರವನ್ನು ಸ್ಥಳೀಯರು ಜಿಲ್ಲಾಡಳಿತದ ಗಮನಕ್ಕೂ ತಂದಿದ್ದರು. ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆ ಶಿಥಿಲಗೊಂಡಿದೆ ಎಂದು ಆರೋಪಿಸಲಾಗಿತ್ತು.

ಫಲ್ಲುಣಿ ನದಿಯಲ್ಲಿ ಇಂದು ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಇಂದು ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸೇತುವೆಯಲ್ಲಿ ಸಂಚರಿಸದೇ ಇದ್ದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸೇತುವೆ ಕೆಳ ಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆಯೂ ನಡೆಯುತ್ತಿದ್ದು, ಹಲವು ಬಾರಿ ಈ ಅಕ್ರಮಕ್ಕೆ ಕಡಿವಾಣ ಹಾಕಲಾಗಿದ್ದರೂ ರಾಜಕೀಯ ಪ್ರಭಾವ ಬಳಸಿ ಅಕ್ರಮ ಮರಲುಗಾರಿಕೆಯನ್ನು‌ ನಡೆಸಲಾಗುತ್ತಿತ್ತು ಎಂದು ದೂರಲಾಗಿದೆ . ಸೇತುವೆ ಕುಸಿದು ಬೀಳಲು ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಸೇತುವೆ ಕುಸಿದಿರುವ ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಯ ಎರಡೂ ತುದಿಗಳಲ್ಲಿ ಪೊಲೀಸ್ ಭಧ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮುರಿದ ಸೇತುವೆ ಸನಿಹ ಬರದಂತೆ ತಡೆಹಿಡಿಯಲಾಗುತ್ತಿದೆ

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search