ಗೂಡ್ಸ್ ಶೆಡ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ : ಇಬ್ಬರ ಬಂಧನ
Posted On June 27, 2018
ಮಂಗಳೂರು: ಮಂಗಳೂರು ನಗರದ ಗೂಡ್ಸ್ ಶೆಡ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಸರಗೋಡು ಜಿಲ್ಲೆಯ ಪೆರಡಾಲ ಅರಿಯಪ್ಪಾಡಿಯ ನಿವಾಸಿ ಅಬ್ದುಲ್ ಕರೀಂ (53), ಕಾಸರಗೋಡು ಜಿಲ್ಲೆಯ ಬಾಯಾರು ತಾಳ್ತಜೆ ಮನೆಯ ನಿವಾಸಿ ಚಂದ್ರಶೇಖರ ಭಟ್ (43) ಬಂಧಿತ ಆರೋಪಿಗಳು. ಬಂಧಿತರಿಂದ ಮಟ್ಕಾ ಆಟಕ್ಕೆ ಬಳಸಿದ 34,650/-ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದ ಗೂಡ್ಸ್ ಶೆಡ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐಯವರಾದ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು
- Advertisement -
Leave A Reply