• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರಿಗೂ ಬಂದಿದೆ  ಫಾರ್ಮಾಲಿನ್‌’ ,”ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ !

Tulunadu News Posted On July 6, 2018
0


0
Shares
  • Share On Facebook
  • Tweet It

ಮಂಗಳೂರು: ಮೀನಿನ ತಾಜಾತನ ಕಾಪಾಡುವುದಕ್ಕೆ ಬೆರೆಸಬಹುದಾದ ವಿಷಕಾರಿ “ಫಾರ್ಮಾಲಿನ್‌’ ಅಥವಾ “ಅಮೋನಿಯಾ’ ರಾಸಾಯನಿಕ ವಸ್ತುಗಳನ್ನು ಪತ್ತೆ ಹಚ್ಚುವ ಕಿಟ್‌ ಇದೀಗ ಮಂಗಳೂರಿಗೂ ಬಂದಿದೆ. ಈ ಕಿಟ್‌ ಅನ್ನು ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಮೀನುಗಾರಿಕೆ ತಂತ್ರಜ್ಞಾನ ಸಂಸ್ಥೆಯಿಂದ ಗುರುವಾರ ತರಿಸಿ ಕೊಳ್ಳಲಾಗಿದೆ.

ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ ಜತೆಗೂಡಿ ಶುಕ್ರವಾರ ನಗರದ ಕೆಲವು ಮಾರುಕಟ್ಟೆ ಸೇರಿದಂತೆ ಮೀನು ಮಾರಾಟವಾಗುವ ಜಾಗಳಲ್ಲಿ ರಾಸಾಯನಿಕ ಮಿಶ್ರಣ ಕುರಿತಂತೆ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಅದರಲ್ಲಿಯೂ ಮೀನು ಪ್ರಿಯರು, ತಾವು ಖರೀದಿಸುವ ಮೀನಿನಲ್ಲಿ ರಾಸಾಯನಿಕ ಪದಾರ್ಥ ಬೆರೆಸಿರುವ ಬಗ್ಗೆ ಅನುಮಾನ ಉಂಟಾದರೆ ನಗರದ ಎಕ್ಕೂರಿನಲ್ಲಿರುವ ಮೀನುಗಾರಿಕಾ ಕಾಲೇಜಿನಲ್ಲಿ ಗುಣಮಟ್ಟ ಪರೀಕ್ಷಿಸಿ ಕೊಳ್ಳಬಹುದಾಗಿದೆ.

ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಹೊರರಾಜ್ಯಗಳಿಂದ ಬರುವ ಮೀನುಗಳಲ್ಲಿ ಕ್ಯಾನ್ಸರ್‌ ಕಾರಕ ಫಾರ್ಮಾ ಲಿನ್‌ ರಾಸಾಯನಿಕ ಅಂಶವಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಂತೆ ಕರಾ ವಳಿಯಲ್ಲೂ ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಕಾಲೇಜಿನ ತಂಡವು ಕೊಚ್ಚಿಗೆ ತೆರಳಿ ಗುರುವಾರ ಕಿಟ್‌ ಮಂಗಳೂರಿಗೆ ತಂದಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search