• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡ ಜಿಪಂನಲ್ಲಿ ಧೂಳು ಹಿಡಿಯುತ್ತಿವೆ ಅಂಗವಿಕಲರ ವಾಹನಗಳು!

Tulunadu News Posted On July 11, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯ ಸರ್ಕಾರದಿಂದ ಅಂಗವಿಕಲರಿಗಾಗಿ ಮಂಜೂರಾಗಿರುವ ವಾಹನಗಳು ವಿತರಣೆಯಾಗದೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ 91 ಅಂಗವಿಕಲರಿಗಾಗಿ ರಾಜ್ಯ ಸರ್ಕಾರದಿಂದ ವಾಹನಗಳೂ ಬಂದಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಂದಾಗಿ ವಾಹನಗಳು ವಿತರಣೆಯಾಗದೇ ತುಕ್ಕು ಹಿಡಿಯುತ್ತಿವೆ.

ಜಿಲ್ಲೆಯ 91 ಫಲಾನುಭವಿಗಳಿಗೆ 2017-18 ರ ಸಾಲಿನಲ್ಲಿ 91 ದ್ವಿಚಕ್ರ ವಾಹನಗಳು ಮಂಜೂರಾಗಿ ಕಳೆದ ಮಾರ್ಚ್ ತಿಂಗಳಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ಬಂದಿವೆ . ಆದರೆ ಅವುಗಳನ್ನು ಈ ವರೆಗೆ ವಿತರಿಸಲಾಗಿಲ್ಲ.ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದ ಕೆಳ ಅಂತಸ್ಥಿನಲ್ಲಿ ಈ ವಾಹನಗಳು ಧೂಳು ಹಿಡಿಯುತ್ತಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಕೆಲ ವಾಹನಗಳು ತುಕ್ಕು ಹಿಡಿಯುತ್ತಿವೆ.

ಈ ದ್ವಿಚಕ್ರ ವಾಹನಗಳು ಇಲಾಖೆಗೆ ಬಂದ ಕಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅವುಗಳ ವಿತರಣೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ವಿಧಾನ ಸಭಾ ಚುನಾವಣೆಯ ಬಳಿಕ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ವಾಹನ ವಿತರಣೆಗೆ ಅಡ್ಡಿಯಾಗಿತ್ತು.ಆದರೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿದಿದೆ.ನೂತನ ಮೈತ್ರಿ ಸರ್ಕಾರ ರಚನೆಯಾಗಿದೆ ಆದರೂ ಫಲಾನುಭವಿಗಳಿಗೆ ಈ ದ್ವಿಚಕ್ರ ವಾಹನಗಳು ವಿತರಣೆಯಾಗಿಲ್ಲ. ಈ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಫಲಾನುಭವಿಗಳಿಗೆ ವಿತರಿಸಬೇಕೆಂಬ ಅಧಿಕಾರಿಗಳ ಧೋರಣೆಯಿಂದಾಗಿ ಈ ವಾಹನಗಳು ಉಪಯೋಗಕ್ಕಿಲ್ಲದೇ ಧೂಳು ಹಿಡಿಯುತ್ತಿವೆ.

ಆದರೆ ಈ ವಾಹನಗಳತ್ತ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ. ಜಿಲ್ಲಾಉಸ್ತುವಾರಿ ಸಚಿವರಿಗೆ ಈ ವಿಚಾರವೇ ಗೊತ್ತಿಲ್ಲ. ಅದರೆ ಅಂಗವಿಕಲ ಫಲಾನುಭವಿಗಳು ಮಾತ್ರ ವಾಹನಗಳಿಗಾಗಿ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಸರ್ಕಾರ ಈ ವಾಹನಗಳ ವಿತರಣೆಗೆ ಗಮನ ಹರಿಸುವುದೋ ಕಾದು ನೋಡಬೇಕಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search