ಜುಲೈ 16ರೊಳಗೆ ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತ
Posted On July 12, 2018
0
ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಜುಲೈ 16ರೊಳಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಸಂಬಂಧ ಸಚಿವರು, ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಮಳೆಯಿಂದ ಹಾನಿಗೊಂಡಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಸ್ತೆಗಳ ದುರಸ್ತಿ ಹಾಗೂ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಸಕರ ಸಭೆ ನಡೆಯಲಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ
Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
January 23, 2026









