• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ, ಮೈಮರೆತರೆ ಪ್ರಪಾತಕ್ಕೆ ಖಚಿತ

Tulunadu News Posted On July 17, 2018


  • Share On Facebook
  • Tweet It

ಮಂಗಳೂರು: ಮಂಗಳೂರು – ಬೆಂಗಳೂರು ಮಧ್ಯೆ ಸಂಚರಿಸುವ ವಾಹನ ಸವಾರರಿಗೊಂದು ಸಂತಸದ ಸುದ್ದಿ. ಆರು ತಿಂಗಳಿನಿಂದ ವಾಹನ ಸಂಚಾರ ಸಂಪೂರ್ಣ ನಿಷೇಧಗೊಂಡಿದ್ದ ಶಿರಾಢಿಘಾಟ್ ರಸ್ತೆ ಭಾನುವಾರದಿಂದ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಶಿರಾಡಿ ಘಾಟ್ ರಸ್ತೆಯ ಎರಡನೇ ಹಂತದ ಕಾಂಕ್ರೀಟ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಭಾನುವಾರದಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಆದರೆ ಈ ರಸ್ತೆಯಲ್ಲಿ ವಾಹನ ಸವಾರರು ಮೈ ಮರೆತೆರೆ ಪ್ರಪಾತಕ್ಕೆ ಉರುಳಿ ಬೀಳುವ ಅತಂಕ ಕೂಡ ಸೃಷ್ಟಿಯಾಗಿದೆ. ಸುರಕ್ಷತೆ ಕಾಮಗಾರಿ ಮುಗಿಸದೆ ತರಾತುರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಎಷ್ಟು ಸುರಕ್ಷಿತ ಎನ್ನುವ ಗೊಂದಲ ಈಗ ಕಾಡತೊಡಗಿದೆ. ಪ್ರತಿ ಮಳೆಗಾಲದ ಸಂದರ್ಭದಲ್ಲೂ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಕೊಡುತ್ತಿದ್ದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ಮಾಡುವ ಕೊನೆಯ ಹಂತಕ್ಕೆ ತಲುಪಿದೆ. ಶಿರಾಡಿಘಾಟ್ ನ 26 ಕಿಲೋಮೀಟರ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿಗಾಗಿ ಕೇಂದ್ರ ಸರಕಾರ ಸುಮಾರು 183 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಹಮ್ಮಿಕೊಂಡಿತ್ತು. ಮೊದಲ ಹಂತದಲ್ಲಿ ಕೆಂಪುಹೊಳೆಯಿಂದ ಮಾರನಹಳ್ಳಿವರೆಗಿನ 13 ಕಿಲೋಮೀಟರ್ ಉದ್ದದ ರಸ್ತೆ ಕಾಮಗಾರಿಯನ್ನು ಈಗಾಗಲೇ ಮುಗಿಸಲಾಗಿದ್ದು, ಅಡ್ಡಹೊಳೆಯಿಂದ ಕೆಂಪುಹೊಳೆವರೆಗಿನ 13 ಕಿಲೋಮೀಟರ್ ರಸ್ತೆ ಕಾಮಗಾರಿ ಇದೀಗ ಮುಗಿಯುವ ಹಂತದಲ್ಲಿದೆ.  ಕಾಮಗಾರಿ ಆರಂಭಗೊಂಡು 6 ತಿಂಗಳು ಕಳೆದಿದ್ದು, ಈ ರಸ್ತೆಯುದ್ದಕ್ಕೂ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುವ ಹಿನ್ನೆಲೆಯಲ್ಲಿ ಜುಲೈ 15ರಿಂದಲೇ ವಾಹನ ಸಂಚಾರಕ್ಕೆ ಮುಕ್ತಗೊಳಲಿದೆ.

ಈ ಶಿರಾಡಿಘಾಟ್ ರಸ್ತೆಯು ಅಪಾಯಕಾರಿ ರಸ್ತೆಗಳಲ್ಲಿ ಒಂದು ಎಂದೇ ಪರಿಗಣಿಸಲಾಗುತ್ತದೆ. ಇಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತನ್ನೂ ನೀಡಲಾಗಿದೆ. ರಸ್ತೆಯ ಎರಡೂ ಕಡೆ ಸಂಪೂರ್ಣ ಇಳಿಜಾರು ಪ್ರದೇಶವಾದ ಕಾರಣ ರಸ್ತೆಯ ಎರಡೂ ಭಾಗಕ್ಕೂ ತಡೆಗೋಡೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಆದರೆ, ಈ ಹಂತದಲ್ಲಿ ರಸ್ತೆಯ ಹಲವಾರು ತಿರುವುಗಳಲ್ಲಿ ತಡೆಗೋಡೆಗಳು ಇನ್ನಷ್ಟೇ ನಿರ್ಮಾಣ ಆಗಬೇಕಿದೆ. ಇನ್ನು ಕೆಲವು ಕಡೆಗಳಲ್ಲಿ ಕಟ್ಟಿದ ತಡೆಗೋಡೆ ಕುಸಿದು ಬಿದ್ದಿದೆ. ಅಲ್ಲದೆ ಮೂರು ಪದರದಲ್ಲಿ ಕಾಂಕ್ರೀಟ್ ಹಾಕಿರುವ ಕಾರಣ ರಸ್ತೆಯು ನೆಲದ ಮಟ್ಟದಿಂದ 1 ಅಡಿಯಷ್ಟು ಎತ್ತರದಲ್ಲಿದೆ. ಅದನ್ನು ಸಮತಟ್ಟಾಗಿಸಲು ಇಕ್ಕೆಲಗಳಲ್ಲೂ ಮಣ್ಣನ್ನು ತುಂಬುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಕೆಲವು ಕಡೆ ವಾಹನ ಚಾಲಕರು ಕೊಂಚ ಆಯ ತಪ್ಪಿದರೂ ಪಾತಾಳಕ್ಕೆ ಉರುಳಿ ಬೀಳುವ ಅಪಾಯವಿದೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search