ಮಂಗಳೂರಿನ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಇಬ್ಬರ ಸೆರೆ
Posted On July 17, 2018
0
ಮಂಗಳೂರು: ಬಾಡಿಗೆ ಮನೆಯಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಒರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು ಮಂಗಳೂರು ಹೊರವಲಯದ ಕೊಟ್ಟಾರ ಚೌಕಿ ಪಂಪ್ ಹೌಸ್ ಬಳಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಒರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಬಂಧಿತ ಆರೋಪಿಯನ್ನು ಪಡುಬಿದ್ರೆಯ ಸಜಿತ್ ಶೇಖರ್ (30) ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು 5 ಮೊಬೈಲ್ ಫೋನ್ ಗಳನ್ನು ಹಾಗೂ 15,240 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಜಿತ್ ಶೇಖರ್ ಈ ಮನೆಯನ್ನು ಬಾಡಿಗೆ ಮನೆ ಪಡೆದು ಬಂಧಿತ ಮಹಿಳೆಯ ಸಹಾಯದಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ಹೇಳಲಾಗಿದೆ .
Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
December 15, 2025









