ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು, ಸ್ಫೋಟಕ ಜಪ್ತಿ, ಬೆಂಗಳೂರಿನಲ್ಲಿ ಒಬ್ಬನ ಬಂಧನ
ನವದೆಹಲಿ/ಬೆಂಗಳೂರು: ದೇಶದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೂ ಐದೇ ದಿನ ಬಾಕಿ ಇರುವ ಮೊದಲೇ ದಿನಾಚರಣೆಗೆ ಉಗ್ರರ ಕರಿನೆರಳು ಇದೆ ಎಂಬುದಕ್ಕೆ ಸಾಕ್ಷಿ ದೊರೆತಿದೆ. ನವದೆಹಲಿಯಲ್ಲಿ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕ ವಶಪಡಿಸಿಕೊಂಡರೆ, ಬೆಂಗಳೂರಿನಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.
ಗುರುವಾರ ತಡರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ಕಾರ್ಬೈನ್, ಕಾರ್ಟಿಡ್ಜ್ ಸೇರಿ ಹಲವು ಸ್ಫೋಟಕ, ವಿವಿಧ ಶಸ್ತ್ರಾಸ್ತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಒಬ್ಬನನ್ನು ಬಂಧಿಸಿದ್ದು, ಈತ ಬಾಂಗ್ಲಾದೇಶದ ಉಗ್ರ ಎಂದು ಪೊಲೀಸರು ಶಂಕಿಸಿದ್ದಾರೆ. ಆದಾಗ್ಯೂ ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸುವುದು ಇವನ ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಸೊಯ್ಯಮ್ ಅಲಿಯಾಸ್ ಆಸ್ ಮೊಹಮ್ಮದ್ ಬಂಧಿತ ಎಂದು ಗುರುತಿಸಲಾಗಿದೆ. ಇವನು ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಬಂದು ನೆಲೆಸಿ, ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಂಕಿತ ಉಗ್ರನ ಬಂಧನದ ಕುರಿತು ಡಿವೈಎಸ್ಪಿ ಸಂಜೀವ್ ಕುಮಾರ್ ಯಾದವ್ ಮಾಹಿತಿ ನೀಡಿದ್ದು, ಜಿ.ಟಿ. ಕರ್ನಲ್ ರಸ್ತೆಯ ಶಿಂಘೋಲ್ ಎಂಬ ಗ್ರಾಮದಲ್ಲಿ ಸೊಯ್ಯಮ್ ನನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೇ ದಿಲ್ಲಿಯಲ್ಲಿ ಅಜಂ ಎಂಬಾತನನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು ಇರುವುದರಿಂದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಭದ್ರತೆ ಒದಗಿಸುತ್ತಿದ್ದಾರೆ. ಅಲ್ಲದೆ, ಹಲವೆಡೆ ಗಸ್ತು ತಿರುಗಿ ಯಾವುದೇ ಆಘಾತಕಾರಿ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.
Leave A Reply