ತುಂಡಾಗಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
Posted On August 17, 2018
0

ಮಂಗಳೂರು: ತುಂಡಾಗಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಅಶೋಕ್ ಡಿಸೋಜ(೨೮) ಎಂದು ಗುರುತಿಸಲಾಗಿದೆ. ವಿವರ: ಗಾಳಿಮಳೆಯಿಂದ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಸಂದರ್ಭ ಅದೇ ದಾರಿಯಲ್ಲಿಸಂಚರಿಸುತ್ತಿದ್ದ ಆಶೋಕ್ ಆಕಸ್ಮಿಕವಾಗಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
October 21, 2025