• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ಬೃಹತ್ ಮಾದಕ ವಸ್ತು ಕೊಕೇನ್ ಮಾರಾಟ ಜಾಲ ಪತ್ತೆ: ೫ ಮಂದಿಯ ಬಂಧನ

Tulunadu News Posted On August 17, 2018
0


0
Shares
  • Share On Facebook
  • Tweet It

ಮಂಗಳೂರು: ನಗರದಲ್ಲಿ ಮಾದಕ ವಸ್ತುವಾದ ಕೋಕೆನ್‌ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಪತ್ತೆ ಮಾಡಿದ ಮಂಗಳೂರು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಜತ್ತೂರು ನಿವಾಸಿ ವಿಜೇಶ್ ಕುಮಾರ್(೩೪), ಪುತ್ತೂರು ನರಿಮೊಗರು ಎಳಿಕಾ ಹೌಸ್ ನಿವಾಸಿ, ಜಿಮ್ ಟ್ರೈನರ್ ನಿತಿನ್ (೩೫), ಮಂಗಳೂರು ಬಿಜೈ ಚರ್ಚ್ ರಸ್ತೆಯ ಎಕ್ಸೋಟಿಕಾ ಆಪಾರ್ಟ್ ಮೆಂಟ್ ನಿವಾಸಿ ಸಂತೋಷ್ ಕುಮಾರ್ (೩೬), ಮಂಗಳೂರು ಬೊಂದೇಲ್ ಕೆಎಚ್ ಬಿ ಕಾಲೋನಿ ನಿವಾಸಿ ಸಂದೀಪ್ ಕುಮಾರ್ (೩೪), ಹಾಗೂ ಮಂಗಳೂರು ಬಿಕರ್ನಕಟ್ಟೆ ಸೌಜನ್ಯ ಲೇನ್, ೨ ನೇ ಕ್ರಾಸ್ ನಿವಾಸಿ ರಾಹುಲ್ (೨೬) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ೫೦,೦೦೦ ರೂ. ಕೋಕೆನ್, ಹೊಂಡಾ ಜಾಝ್, ಹುಂಡೈ ಐ೨೦, ಮಾರುತಿ ಝೆನ್, ೭ ಮೊಬೈಲ್ ಫೋನ್ ಹಾಗೂ ೧,೦೨,೦೦೦ ರೂ. ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಕೊಕೇನ್ ಮಾರಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಗೋವಾದಿಂದ ಈ ಮಾದಕ ವಸ್ತುಗಳನ್ನು ತಂದು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಮಾದಕ ವಸ್ತುವಾದ ಕೋಕೆನ್‌ನ್ನು ನಗರದಲ್ಲಿ ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search