ಶಾಸಕ ವೇದವ್ಯಾಸ ಕಾಮತ್ ವಿನಂತಿ ಮೇರೆಗೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆ
ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿ ಮೇರೆಗೆ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆಯನ್ನು ವೈಯ್ಯಕ್ತಿಕವಾಗಿ ನೀಡಿದ್ದಾರೆ. ವೇದವ್ಯಾಸ ಕಾಮತ್ ಅವರು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಕೇರಳ ಮತ್ತು ಕೊಡಗಿನ ಪ್ರವಾಹಕ್ಕೆ ದೇಣಿಗೆ ನೀಡುವಂತೆ ಮನವು ಮಾಡಿದ್ದರು.
ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿಯ ಮೇರೆಗೆ ರಾಜ್ಯಪಾಲರು ಕೇರಳದ ನೆರೆಪೀಡಿತ ಪ್ರದೇಶಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿರು ಹಾನಿಗೆ ಪರಿಹಾರವಾಗಿ ನಾಗಾಲ್ಯಾಂಡ್ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ರೂಪಾಯಿಯನ್ನು ಶಾಸಕರ ಮನವಿಯಂತೆ ಬಿಡುಗಡೆ ಮಾಡಲಾಗಿದೆ. ತಮ್ಮ ವಿನಂತಿಯನ್ನು ಪುರಸ್ಕರಿಸಿ ನೆರೆಪೀಡಿತ ಪ್ರದೇಶಕ್ಕೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲು ಸಹಕರಿಸಿದ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಕೃತಜ್ಞತೆ ಸಲ್ಲಿಸಿದ್ದಾರೆ.
ಸಂಕಷ್ಟದಲ್ಲಿ ಜನರಿಗಾಗಿ ಪಿ.ಬಿ.ಆಚಾರ್ಯ ಅವರ ಮನಸ್ಸು ಯಾವಾಗಲೂ ಮಿಡಿಯುತ್ತದೆ. ಕೇರಳ ಮತ್ತು ಕೊಡಗು ಜನರು ಆದಷ್ಟು ಬೇಗ ಸಹಜ ಜೀವನಕ್ಕೆ ಮರಳಲಿ ಎಂದು ಪಿ.ಬಿ.ಆಚಾರ್ಯ ಅವರು ಹಾರೈಸಿದ್ದಾರೆ ಎಂದು ಶಾಸಕರು ಹೇಳಿದ್ದಾರೆ. ಬಿಜೆಪಿ ಸಂಸದರು, ಶಾಸಕರ ಒಂದು ತಿಂಗಳ ವೇತನ : ‘ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಸಂತ್ರಸ್ಥರ ನಿಧಿಗೆ ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಒಂದು ತಿಂಗಳ ವೇತನ ನೀಡಲಾಗುತ್ತದೆ’ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Leave A Reply