ಕೊಡಗಿನಲ್ಲಿ ಸಂಭವಿಸಿದ ಜಲಪ್ರಳಯ; ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿದೆ ಪುತ್ತೂರಿನ ವಿದ್ಯಾವರ್ಧಕ ಸಂಘ
ಮಂಗಳೂರು: ಕೊಡಗಿನಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಸಿಲುಕಿ ಸಂತ್ರಸ್ತರಾದ ಕುಟುಂಬಗಳ ಮಕ್ಕಳಿಗೆ ಶಿಕ್ಷಣಕ್ಕೆ ತೊಂದರೆಯಾದಲ್ಲಿ ಒಂದು ವರ್ಷ ಉಚಿತ ಶಿಕ್ಷಣ ನೀಡಲು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮುಂದಾಗಿದೆ. ಸಂಘದ ಕಾರ್ಯದರ್ಶಿ ಕೃಷ್ಣ ಭಟ್ ಈ ಬಗ್ಗೆ ಮಾಹಿತಿ ನೀಡಿದ್ದು ಜಲಪ್ರಳಯದಲ್ಲಿ ಸಂತ್ರಸ್ತರಾದ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಲು ತೊಂದರೆಯಾದಲ್ಲಿ ವಿದ್ಯಾವರ್ಧಕ ಸಂಘವನ್ನು ಸಂಪರ್ಕಿಸಿದರೆ ಅಂಥಹ ಮಕ್ಕಳಿಗೆ ಉಚಿತ ಪ್ರವೇಶದ ಜೊತೆಗೆ ಒಂದು ವರ್ಷದ ಉಚಿತ ಶಿಕ್ಷಣದ ಜೊತೆಗೆ ವಸತಿಯನ್ನೂ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಎಲ್ ಕೆ ಜಿ ಯಿಂದ ಹಿಡಿದು ಇಂಜಿನಿಯರಿಂಗ್ ವರೆಗಿನ ಶಿಕ್ಷಣ ಸಂಸ್ಥೆಗಳಿವೆ. 5 ನೇ ಕ್ಲಾಸ್ ನಿಂದ ಹಿಡಿದು ಇಂಜಿನಿಯರಿಂಗ್ ವರೆಗಿನ ಶಿಕ್ಷಣಕ್ಕೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ನೀಡಲು ವಿದ್ಯಾವರ್ಧಕ ಸಂಘ ನಿರ್ಧರಿಸಿದೆ. ಸಂತ್ರಸ್ತರ ಮಕ್ಕಳಿಗೆ ಒಂದು ವರ್ಷ ಉಚಿತ ಶಿಕ್ಷಣ ಕೊಡುವ ಜೊತೆಗೆ ವಿದ್ಯಾರ್ಥಿಯ ಆರ್ಥಿಕ ಸ್ಥಿತಿ ಸುಧಾರಿಸದೇ ಹೋದಲ್ಲಿ ಉಚಿತ ಶಿಕ್ಷಣ ಸೌಲಭ್ಯವನ್ನು ಮುಂದುವರಿಸಲೂ ಸಂಘ ನಿರ್ಧರಿಸಿದೆ.
Leave A Reply