• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೆಎಂಎಫ್ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ ಜಾಲ ಪತ್ತೆ: 9 ಜನರ ಬಂಧನ!

Tulunadu News Posted On August 28, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ನಿಗಮಕ್ಕೆ ಸರಬರಾಜಾಗುತ್ತಿದ್ದ ಹಾಲಿನಲ್ಲಿ ವಿಷಪೂರಿತ ವಸ್ತುಗಳನ್ನು ಕಲಬೆರಕೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧಿಕಾರಿಗಳು ಹಾಗೂ ಪೊಲೀಸರ ತಂಡ ಯಶಸ್ವಿಯಾಗಿದೆ.

ಹಾಸನ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿರುವ ಹಾಲಿಗೆ ವಿಷಕಾರ ಪದಾರ್ಥಗಳನ್ನು ಮಿಶ್ರಣಮಾಡಲಾಗುತ್ತಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಮಾರ್ಚ್ 20 ರಂದು ಹಾಸನ ಕೆಎಂಎಫ್ ಘಟಕಕ್ಕೆ ಪತ್ರ ಬರೆದಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿ, ಜಿಲ್ಲೆಯಲ್ಲಿನ ಸುಮಾರು 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಹಾಲಿನ ಕ್ಯಾನ್ ಸಾಗಾಣೆ ಮಾಡುವ ವಾಹನಗಳಲ್ಲೇ ಮಿಕ್ಸಿಂಗ್ ಮಾಡುತ್ತಿದ್ದರು. ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಬೀರೂರು ಘಟಕಗಳಿಂದ ಜಾಲಕ್ಕೆ ಸಾಥ್ ನೀಡಲಾಗುತಿತ್ತು. ಅಷ್ಟೇ ಅಲ್ಲದೇ ಮಾಚೇನಹಳ್ಳಿಯಲ್ಲೂ ಸಹ ಕಲಬೆರಕೆ ಜಾಲ ನಡೆಯುತಿತ್ತು ಎನ್ನುವ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ದಂಧೆಗೆ ಕೆಎಂಎಫ್ ಅಧಿಕಾರಿಗಳೇ ಬೆಂಬಲ ನೀಡುತ್ತಿದ್ದರಿಂದ ತನಿಖೆ ವಿಳಂಬಗೊಂಡಿತ್ತು. ಖುದ್ದು ಕೆಎಂಎಫ್‍ನ ಅಧಿಕಾರಿ ಸೌಮ್ಯರವರು ಮರು ತನಿಖೆಗೆ ಆದೇಶ ನೀಡಿ, ಚುರುಕುಗೊಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತನಿಖೆ ಮುಂದುವರಿಸಿದ್ದು, ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search