• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Tulunadu News Posted On August 28, 2018


  • Share On Facebook
  • Tweet It

ಮಂಗಳೂರು: ಕೊಡಗು ಮತ್ತು ಕರಾವಳಿಯನ್ನು ಸಂಪರ್ಕಿಸಲು ಆರಂಭಗೊಂಡಿರುವ ಸುಳ್ಯ ಭಾಗಮಂಡಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಕರಿಕೆ ಎಂಬಲ್ಲಿ 10 ಚಕ್ರದ ಲಾರಿಯೊಂದು ತಿರುವುವಿನಲ್ಲಿ ಸಿಲುಕಿಕೊಂಡ ಪರಿಣಾಮ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 2 ಗಂಟೆಯಿಂದ ವಾಹನಗಳು ರಸ್ತೆಯಲ್ಲಿ ನಿಂತಿದ್ದು ಲಾರಿಯನ್ನು ಹೊರತೆಗೆಯಲು ಹರಸಾಹಸ ನಡೆಯುತ್ತಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆದರೂ ಈ ಲಾರಿ ಹೋಗಿದ್ದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಸಂಪಾಜೆ ಘಾಟಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸುಳ್ಯ, ಕರಿಕೆ ಮಾರ್ಗವಾಗಿ ಭಾಗಮಂಡಲಕ್ಕೆ ಬಸ್ ಸಂಚಾರ ಆರಂಭಗೊಂಡಿತ್ತು. ಲಘು ವಾಹನಗಳ ಸಂಚಾರಕ್ಕ ಮಾತ್ರ ಈ ರಸ್ತೆಯೋಗ್ಯವಾಗಿದೆ.

ಮಡಿಕೇರಿ, ಭಾಗಮಂಡಲ, ಕರಿಕೆ, ಆಲೆಟ್ಟಿ, ಮಾರ್ಗವಾಗಿ ಸುಳ್ಯಕ್ಕೆ ಏಳು ಬಸ್ಸುಗಳು ಈಗ ಸಂಚರಿಸುತ್ತಿವೆ. ಬಸ್ ಪ್ರಯಾಣದ ಅವಧಿ 4 ಗಂಟೆಯಾಗಿದ್ದು ಒಂದು ಟಿಕೆಟ್‍ಗೆ 90 ರೂ. ಶುಲ್ಕ ನಿಗದಿಯಾಗಿದೆ. ಈ ಮೊದಲು 50 ಕಿ.ಮೀ ದೂರವನ್ನು ಬಸ್ಸಿನಲ್ಲಿ 1 ಗಂಟೆ 15 ನಿಮಿಷದಲ್ಲಿ ತಲುಪಬಹುದಾಗಿತ್ತು.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search