• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜೀವ್ ಗಾಂಧಿ ಮಾದರಿಯಲ್ಲಿ ಮೋದಿ ಹತ್ಯೆಗೆ ಸಂಚು, 6 ಶಂಕಿತರ ವಶ

Tulunadu News Posted On August 28, 2018
0


0
Shares
  • Share On Facebook
  • Tweet It

ಹೈದರಾಬಾದ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ಮಾದರಿಯಲ್ಲಿಯೇ ನರೇಂದ್ರ ಮೋದಿ ಅವರನ್ನು ಕೊಲ್ಲಲು ಸಂಚು ನಡೆಸಿದ್ದ ಕೆಲವು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತೆಲಂಗಾಣ, ಆಂದ್ರಪ್ರದೇಶದ ಕ್ರಾಂತಿಕಾರಿ ಕವಿ ಪಿ.ವರವರರಾವ್ ಅವರನ್ನು ಸೇರಿಸಿ ಒಟ್ಟು ಆರು ಮಂದಿಯನ್ನು ವಶಕ್ಕೆ ಪಡೆದಿರುವ ವಿಶೇಷ ಪೊಲೀಸರು ಆರೋಪಿಗಳ ಸತತ ವಿಚಾರಣೆ ನಡೆಸುತ್ತಿದ್ದಾರೆ.

ವಶಕ್ಕೆ ಪಡೆದಿರುವ ಎಲ್ಲರಿಗೂ ನಿಷೇಧಿತ ಮಾವೋವಾದಿ ಸಂಘಟನೆಗಳ ನಂಟಿದ್ದು, ಕವಿ ವರವರರಾವ್ ಅವರ ಪುತ್ರ ಆಂಧ್ರಪ್ರದೇಶ, ಗೋವಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಕೆಲವರಿಗೆ ‘ಮೋದಿ ಹತ್ಯೆಗೆ ಆರ್ಥಿಕ ನೆರವು ಬೇಕು’ ಎಂದು ಸಂದೇಶ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ.

ಕ್ರಾಂತಿಕಾರಿ ಕವಿಯ ಬಂಧನ; ಪುಣೆಯಿಂದ ಇಂದು ಬೆಳ್ಳಂಬೆಳಿಗ್ಗೆ ಆಗಮಿಸಿದ ವಿಶೇಷ ಪೊಲೀಸರು, ಹೈದರಾಬಾದ್‌ನಲ್ಲಿರುವ ವರವರರಾವ್ ಅವರ ಮನೆ ಮೇಲೆ ದಾಳಿ ನಡೆಸಿ ಎಲ್ಲ ಸಂಪರ್ಕಗಳನ್ನು ಕಡಿದು, ಸತತ ಎಂಟು ಗಂಟೆಗಳ ಕಾಲ ಮನೆ ಸದಸ್ಯರ ವಿಚಾರಣೆ ನಡೆಸಿ ವರವರರಾವ್ ಅವರನ್ನು ಬಂಧಿಸಿದ್ದಾರೆ.

ಇಬ್ಬರು ಪತ್ರಕರ್ತರು, ಒಬ್ಬ ಪ್ರೊಫೆಸರ್ ವಶಕ್ಕೆ; ವರವರರಾವ್ ಜೊತೆಗೆ ಇನ್ನೂ ಏಳು ಜನರನ್ನು ಮೋದಿ ಹತ್ಯೆ ಸಂಚು ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ ಇಬ್ಬರು ಪತ್ರಕರ್ತರು, ಇಎಫ್‌ಎಲ್‌ಯು ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ಇದ್ದಾರೆ ಎನ್ನಲಾಗಿದೆ. ವರವರರಾವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬ್ಯಾಂಕ್ ಖಾತೆ, ಇ-ಮೇಲ್ ತನಿಖೆ; ವರವರರಾವ್ ಅವರ ಬ್ಯಾಂಕ್ ಖಾತೆ, ಇ-ಮೇಲ್ ಸೇರಿ ಎಲ್ಲವನ್ನೂ ತನಿಖೆಗೆ ಒಳಪಡಿಸಲಾಗಿದೆ. ಕೆಲವು ತಿಂಗಳುಗಳ ಹಿಂದೆ ಅಷ್ಟೆ ಕೊರೆಗಾಂವ್ ಗಲಭೆ ತನಿಖೆ ವೇಳೆಯಲ್ಲಿ ಮೋದಿ ಅವರನ್ನು ರಾಜೀವ್ ಮಾದರಿಯಲ್ಲಿ ಹತ್ಯೆ ಮಾಡಬೇಕು ಎಂದು ಬರೆದಿದ್ದ ಪತ್ರವೊಂದು ಪೊಲೀಸರಿಗೆ ದೊರೆತಿತ್ತು. ಹಾಗಾಗಿ ಮೋದಿ ಅವರಿಗೆ ಗರಿಷ್ಟ ಭದ್ರತೆ ನೀಡಲಾಗುತ್ತಿದೆ.

ಆತ್ಮಹತ್ಯೆ ಬಾಂಬ್ ಸ್ಫೋಟಿಸಲು ಸಂಚು; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರಂಬೂರಿನಲ್ಲಿ ಮಾನವ ಬಾಂಬ್ ಮೂಲಕ ಎಲ್‌ಟಿಟಿಇ ಉಗ್ರರು ಹತ್ಯೆ ಮಾಡಿದ್ದರು. ಅದೇ ಮಾದರಿಯಲ್ಲಿ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ.

ಬೇರೆ ರಾಜ್ಯಗಳಿಗೂ ಪೊಲೀಸರ ಭೇಟಿ; ವರವರರಾವ್ ಅವರು ನೆರವು ಬೇಡಿದ್ದ ವ್ಯಕ್ತಿಗಳನ್ನೂ ವಿಶೇಷ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜಾರ್ಖಂಡ್, ಗೋವಾ, ಆಂಧ್ರಪ್ರದೇಶ, ದೆಹಲಿಗಳಿಗೂ ವಿಶೇಷ ಪೊಲೀಸ್ ದಳ ಭೇಟಿ ನೀಡಿ ಈಗಾಗಲೇ ತನಿಖೆ ಆರಂಭಿಸಿದೆ.

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search