ಸಕಲೇಶಪುರ, ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ; ನಾಲ್ಕು ರೈಲುಗಳ ಸಂಚಾರ ರದ್ದು
ಸಕಲೇಶಪುರ: ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗದಲ್ಲಿ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ಘಾಟ್ ರಸ್ತೆ ನಡುವೆ ಅಲ್ಲಲ್ಲಿ ಭೂಕುಸಿತ ಉಂಟಾಗಿರುವುದರಿಂದ ನಾಲ್ಕು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ನೈಋತ್ಯ ರೈಲ್ವೆಯ ಮೈಸೂರು ರೈಲ್ವೆ ವಿಭಾಗದಲ್ಲಿನ ದೋಣಿಗಲ್, ಯಡಕುಮರಿ ಹಾಗೂ ಕಡಗರವಳ್ಳಿ ವಿಭಾಗದಲ್ಲಿ ಹಲವೆಡೆ ಭೂ ಕುಸಿತ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ನಾಲ್ಕು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ರೈಲು ಸಂಖ್ಯೆ 16517 ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರೈಲ್ವೆ ನಿಲ್ದಾಣದಿಂದ ಕಣ್ಣೂರು, ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 28ರ ಸಂಚಾರವನ್ನು ರದ್ದುಪಡಿಸಲಾಗಿದೆ.
ಅದೇ ರೀತಿ ರೈಲು ಸಂಖ್ಯೆ 16511 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಕಣ್ಣೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 29ರಿಂದ 31ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರು-ಕಾರವಾರದಿಂದ ಬೆಂಗಳೂರಿಗೆ ಬರುವ ರೈಲು ಸಂಖ್ಯೆ 16518ರ ಆಗಸ್ಟ್ 29ರ ಸಂಚಾರವನ್ನು ರದ್ದುಪಡಿಸಲಾಗಿದೆ. ಅಲ್ಲದೆ ಕಣ್ಣೂರಿನಿಂದ ಬೆಂಗಳೂರಿಗೆ ಬರುವ ಇದೇ ರೈಲು ಸಂಚಾರವನ್ನು ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ಮೂರು ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ನೈಋತ್ಯ ಪ್ರಕಟಣೆ ತಿಳಿಸಿದೆ.
Leave A Reply