• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದಂಪತಿಯ ಮೇಲೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಪ್ರಕರಣ; ಆರೋಪಿಯ ಬಂಧನ

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು; ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೀರ್ಥಹಳ್ಳಿ ನಿವಾಸಿಯಾದ ಗುಂಡಪ್ಪ ಗೌಡ ಅವರ ಮಗ ಪ್ರವೀಣ್ ಕೆ.ಜಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಅಂದಾಜು ರೂ.೭೫೦೦೦ ಮೌಲ್ಯದ ೩ ಪವನ್ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ; ಮೊಡಂಕಾಪು ಎಂಬಲ್ಲಿನ ನಿವಾಸಿ ಜನಾರ್ಧನ ಹೊಳ್ಳ ಮತ್ತು ಅವರ ಹೆಂಡತಿ ಇಬ್ಬರೇ ಮನೆಯಲ್ಲಿರುವಾಗ ಮನೆಗೆ ಹೊಕ್ಕಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಾರಕಾಯುಧಗಳಿಂದ ಸದ್ರಿ ಜನಾರ್ಧನ್‌ರವರಿಗೆ ಹಲ್ಲೆ ಮಾಡಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಅಧೀಕ್ಷಕರಾದ ಡಾ.ಬಿ ಆರ್ ರವಿಕಾಂತೇ ಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಜಿತ್ ವಿ.ಜೆ ಮತ್ತು ಎಎಸ್‌ಪಿ ರವರಾದ ಋಷಿಕೇಶ್ ಸೋನವಾಣೆ ಅವರ ಸೂಕ್ತ ಮಾರ್ಗದರ್ಶನದಂತೆ ಬಂಟ್ವಾಳ ವೃತ್ತನಿರೀಕ್ಷಕರಾದ ಟಿ.ಡಿ ನಾಗರಾಜ್, ಅಪರಾಧ ಪತ್ತೆ ದಳದಲ್ಲಿದ್ದ ಚಂದ್ರಶೇಖರ್ ಪಿಎಸ್‌ಐ ಬಂಟ್ವಾಳ ನಗರ ಪೊಲೀಸ್ ಠಾಣೆ, ಹರೀಶ್ ಎಂ.ಆರ್ ಅಪರಾಧ ವಿಭಾಗ ಪಿಎಸ್‌ಐ ಬಂಟ್ವಾಳ ನಗರ ಪೊಲೀಸ್ ಠಾಣೆ, ಎಎಸ್‌ಐ ಸಂಜೀವ ಕೆ, ಸಿಬ್ಬಂಧಿಗಳಾದ ಸುರೇಶ್ ಪಡರ, ಸುಜು, ಅಬ್ದುಲ್ ಕರೀಂ, ಗಿರೀಶ್, ಯೋಗಿಶ್, ಕುಮಾರ್ ಹೆಚ್.ಕೆ, ವಿವೇಕ ಕೆ, ಮಲ್ಲಿಕ್ ವಿ, ಉಮೇಶ್ ಹೆಚ್, ಹನಮಂತ ತಳವಾರ್, ಪ್ರಶಾಂತ್, ಲಕ್ಷ್ಮಣ್, ಕೇದಾರ್ ಅವರು ಭಾಗವಹಿಸಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಅ.ಕ್ರ ೩೬೫/೨೦೧೮ ಕಲಂ: ೪೪೮.೩೯೭. ಐಪಿಸಿ. ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search