• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುನಿಶ್ರೀ ತರುಣ ಸಾಗರ ವಿಧಿವಶ: ಜೈನ ಮಂದಿರದಲ್ಲೇ ಕೊನೆಯುಸಿರು

Tulunadu News Posted On September 1, 2018
0


0
Shares
  • Share On Facebook
  • Tweet It

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಜೈನ ಮುನಿ ಶ್ರೀ ತರುಣ ಸಾಗರ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ದೆಹಲಿಯ ಕೃಷ್ಣ ನಗರದಲ್ಲಿರುವ ರಾಧಪುರಿ ಜೈನ್ ದೇವಾಲಯದಲ್ಲಿ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದರು.

ಬಹಳ ದಿನಗಳಿಂದ ಜಾಂಡೀಸ್ ನಿಂದ ಬಳಲುತ್ತಿದ್ದ ಅವರನ್ನು 20 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯ ತೀರಾ ಹದಗೆಟ್ಟಿದ್ದರೂ ಕಳೆದ ಎರಡು ದಿನಗಳಿಂದ ಔಷಧವನ್ನೂ ಸೇವಿಸದೆ ಇದ್ದರು. ಜೊತೆಗೆ ಜೈನ ಮಂದಿರಕ್ಕೆ ತಮ್ಮನ್ನು ಕರೆದೊಯ್ಯುವಂತೆ ಅವರೇ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ಜೈನ ಮಂದಿರಕ್ಕೆ ಕರೆದುಕೊಂಡು ಬರಲಾಗಿತ್ತು.

ಮಧ್ಯಪ್ರದೇಶದ ದಾಹೋಹ್ ಜಿಲ್ಲೆಯಲ್ಲಿ ಜೂನ್ 26, 1967 ರಲ್ಲಿ ಜನಿಸಿದ ತರುಣ ಸಾಗರ ಅವರ ಮೂಲ ಹೆಸರು ಪವನ್ ಕುಮಾರ್ ಜೈನ್. 1981 ಮಾರ್ಚ್ 8 ರಂದು ಮನೆ ಬಿಟ್ಟು ಹೊರಬಂದ ಅವರು ಸನ್ಯಾಸ ಸ್ವೀಕರಿಸಿದ್ದರು. ದಿಗಂಬರ ಪಂಥದ ಅನುಯಾಯಿಯಾಗಿದ್ದ ತರುಣ ಸಾಗರ ಅವರಿಗೆ ಲಕ್ಷಾಂತರ ಜನ ಭಕ್ತರಿದ್ದರು. ಅವರ ನಿಧನಕ್ಕೆ ದೇಶದಾದ್ಯಮಟ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಅಂತ್ಯ ಸಂಸ್ಕಾರ ಉತ್ತರ ಪ್ರದೇಶದ ಮುರಾದ್ ನಗರದ ತರುಣಸಾಗರಂ ನಲ್ಲಿ ನಡೆಯಲಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search