ಕನ್ಯಾಡಿಯಲ್ಲಿ ಧರ್ಮ ಸಂಸದ್ ಗೆ ಅದ್ದೂರಿ ಚಾಲನೆ
ಧರ್ಮಸ್ಥಳ :ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ನಡೆಯುತ್ತಿರುವ ರಾಷ್ಟ್ರೀಯ ಧರ್ಮಸಂಸದ್ ಗೆ ಅದ್ದೂರಿ ಚಾಲನೆ ದೊರೆತಿದೆ. ‘ಧರ್ಮ ಸಂಸದ್’ ಉದ್ಘಾಟನೆಗೂ ಮುನ್ನಾ ವೈಭವದ ಶೋಭಯಾತ್ರೆ ನಡೆಯಿತು. ಈ ಬೃಹತ್ ಮೆರವಣಿಗೆಯಲ್ಲಿ ಸಾಧುಸಂತರು, ಯತಿವರ್ಯರು, ಮಹಾಮಂಡಲೇಶ್ವರರು, ಧರ್ಮ ಪೀಠಾಧೀಶ್ವರರು ಸೇರಿದಂತೆ ಸಾವಿರಾರು ಮಂದಿ ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಹರಿದ್ವಾರದಿಂದ ಆಗಮಿಸಿದ್ದ ನೂರಾರು ನಾಗಾ ಸಾಧುಗಳು ಈ ಧಾರ್ಮಿಕ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದರು.
ಆ ಬಳಿಕ ರಾಷ್ಟ್ರೀಯ ಧರ್ಮ ಸಂಸದ್ ನ್ನು ಹರಿದ್ವಾರದ ಜುನಾ ಅಖಾಡದ ಮಹಾಮಂಡಲೇಶ್ವರ ಮಹಾಂತ ದಯಾನಂದ ಸರಸ್ವತಿ ಸೋಮವಾರ ಉದ್ಘಾಟಿಸಿದರು. ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವಿವಿಧ ಮಠಗಳ ಸ್ವಾಮೀಜಿಗಳು, ಹಲವು ಅಖಾಡಗಳ ಮಹಾಂತರು, ನಾಥ ಪಂಥದ ಸ್ವಾಮೀಜಿಗಳು, ನಾಗಾ ಸಾಧುಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಾಧು, ಸಂತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Leave A Reply