• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಐಎಡಿಬಿ ವಂಚನೆ : ಸಚಿವ ಯು.ಟಿ.ಖಾದರ್‌ಗೆ ಮುತ್ತಿಗೆ

Tulunadu News Posted On September 4, 2018
0


0
Shares
  • Share On Facebook
  • Tweet It

ಸುರತ್ಕಲ್ : ಎಂಆರ್‌ಪಿಎಲ್ ಯೋಜನಾ ವಿಸ್ತರಣೆಯಲ್ಲಿ ಕೆಐಎಡಿಬಿ ಅಕ್ರಮ ನಡೆಸಿದೆ ಎಂದು ಸಚಿವ ಯು.ಟಿ.ಖಾದರ್‌ ಕಾರಿಗೆ ಮುತ್ತಿಗೆ ಹಾಕಲಾಗಿದೆ. ವ್ಯವಸಾಯ ಮಾಡುವಷ್ಟು ಭೂಮಿ ಫಲವತ್ತಾಗಿದ್ದರೂ ಅದನ್ನು ಒಣ ಭೂಮಿ ಎಂದು ಎಂಆರ್‌ಪಿಎಲ್ ಸಲ್ಲಿಸಿದ ಸುಳ್ಳು ಅರ್ಜಿಯನ್ನು ಒಪ್ಪಿಕೊಂಡು ರೈತರನ್ನು ವಂಚಿಸಲಾಗಿದೆ ಎಂಬುದು ಆರೋಪ. ಎಂಆರ್‌ಪಿಎಲ್ ಯೋಜನಾ ವಿಸ್ತರಣೆಗೆ ಸಂಬಂಧಿಸಿದಂತೆ ಕುತ್ತೆತ್ತೂರು, ಪೆರ್ಮುದೆ ಮತ್ತು ಇತರ ಗ್ರಾಮಗಳ ಕೃಷಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಳ್ಳುವ ಪ್ರಕ್ರಿಯೆಯಲ್ಲಿ ಕೆಐಎಡಿಬಿ ಅಧಿಕಾರಿಗಳು ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕೆಐಎಡಿಬಿಯ ಈ ಅಕ್ರಮವನ್ನು ಪ್ರತಿಭಟಿಸಿ ವಿಶೇಷ ಭೂಸ್ವಾಧೀನಾಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ತರು ಆಗ್ರಹಿಸಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರು ಸ್ವಾಧೀನತೆಯ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಅಕ್ರಮ ಕಂಡು ಬಂದಿದ್ದು, ತನಿಖೆ ನಡೆಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಅಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದರು ಯಾವುದೇ ತನಿಖೆ ನಡೆಸಿಲ್ಲ ಎಂದು ಗ್ರಾಮಸ್ಥರು ದೂರಿದರು.

ತನಿಖೆ ನಡೆಸಲು ಜಿಲ್ಲಾಡಳಿತವು ನಿರಾಸಕ್ತಿಯನ್ನು ತೋರಿಸುತ್ತಿದೆ. ಭ್ರಷ್ಟ ಕೆಐಎಡಿಬಿ ಅಧಿಕಾರಿಗಳ ಪರವಾಗಿ ನಿಲುವು ತಳಿದಂತೆ ಕಂಡು ಬರುತ್ತಿದೆ. ಈ ರೀತಿಯ ಕಾನೂನು ಬದ್ಧ ಹೋರಾಟಕ್ಕೆ ಮಾನ್ಯತೆ ಸಿಗದೇ ಇದ್ದರೆ ನಾವು ಯಾವ ರೀತಿ ಪ್ರತಿಭಟನೆಯನ್ನು ಮಾಡಬೇಕು? ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಪೆರ್ಮುದೆ, ಕುತ್ತೆತ್ತೂರು ಮತ್ತಿತರ ಗ್ರಾಮಗಳ ಭೂಮಿಯು ಮೂರು ಬೆಳೆ ಬೆಳೆಯುವಷ್ಟು ಫಲವತ್ತಾಗಿದ್ದರೂ ಅದನ್ನು ಒಣ ಭೂಮಿ ಎಂದು ಎಂಆರ್‌ಪಿಎಲ್ ಸಲ್ಲಿಸಿದ ಸುಳ್ಳು ಅರ್ಜಿಯನ್ನು ಒಪ್ಪಿಕೊಂಡು ರೈತರನ್ನು ವಂಚಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದು ಕೃಷಿಯೋಗ್ಯ ಭೂಮಿ ಎಂಬುದಕ್ಕೆ ಇಲ್ಲಿ ನಡೆಯುತ್ತಿದ್ದ ಕೃಷಿಯೇ ಸಾಕ್ಷಿಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗಿದೆ. ರೈತರಿಗೆ ವಂಚಿಸಿ ಅವರ ಕೊರಳಿಗೆ ಉರುಳು ಹಾಕಲು ಸಿದ್ದರಾದವರ ಪರವಾಗಿ ವರ್ತಿಸುವ ಜನಪ್ರತಿನಿಧಿಗಳು ರಾಜೀನಾಮೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search