ಮಂಗಳೂರಿನಲ್ಲಿ ಬಿಜೆಪಿ ಶಾಸಕ, ಕೈ ಕಾರ್ಯಕರ್ತರ ನಡುವೆ ಘರ್ಷಣೆ
ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಬಿಸಿ ಕರಾವಳಿಗೂ ತಟ್ಟಿದೆ. ಬಂದ್ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಬಂದ್ ವಾತಾವರಣ ಗೋಚರಿಸತೊಡಗಿತ್ತು.
ಬಿಜೆಪಿ ಭದ್ರ ಕೋಟೆಯಲ್ಲಿ ಬಂದ್ ಯಶಸ್ವಿಯಾಗುವುದೇ ಅನುಮಾನ ಅಂತಲೇ ಹೇಳಲಾಗುತ್ತಿತ್ತು. ಆದರೆ ಕಾಂಗ್ರೆಸ್ ಕರೆನೀಡಿರುವ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದಲೇ ಖಾಸಗಿ ಹಾಗೂ ಸರಕಾರಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದರೂ ಕೆಲವೆಡೆ ಅಂಗಡಿ ತೆರೆದು ವ್ಯಾಪಾರ ನಡೆಸಲಾಗುತ್ತಿದೆ.
ಮಂಗಳೂರಿನ ಲೈಫ್ ವೈನ್ ಎಂದೇ ಹೇಳಲಾಗುವ ಖಾಸಗಿ ಸಿಟಿ ಬಸ್ ಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜನ ಸಂಚಾರ ವಿರಳವಾಗಿದೆ. ಆದರೆ ಈ ನಡುವೆ ನಗರದ ಕೆಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಬಲವಂತದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.
Leave A Reply