ಮಂಗಳೂರು ದಸರಾ ಸಿ.ಎಂ ಉದ್ಘಾಟನೆ
Posted On September 23, 2018

ಮಂಗಳೂರು – ದಕ್ಷಿಣ ಕರ್ನಾಟಕದ ದಸರಾ ಎಂದೇ ಖ್ಯಾತಿ ಪಡೆದಿರುವ ಮಂಗಳೂರಿನ ಕುದ್ರೋಳಿ ದಸರಾ ವನ್ನು ಈ ಬಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಮಂಗಳೂರು ದಸರಾ ರೂವಾರಿ ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಅಕ್ಟೋಬರ್ 10 ರಿಂದ 19 ರವರೆಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಮಂಗಳೂರು ದಸರಾದ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಉದ್ಘಾಟನೆಯ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದೆಂದು ಪೂಜಾರಿ ಮಾಹಿತಿ ನೀಡಿದ್ದಾರೆ.ಮಂಗಳೂರು ದಸರಾ 10 ದಿನಗಳ ಕಾಲ ಅದ್ದೂರಿಯಿಂದ ನಡೆಯಲಿದೆ ಎಂದು ತಿಳಿಸಿದರು.
- Advertisement -
Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
March 25, 2023
Leave A Reply