• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡಿದ ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌

TNN Correspondent Posted On September 23, 2018
0


0
Shares
  • Share On Facebook
  • Tweet It

ದೆಹಲಿ- ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರರು ಮೂವರು ಪೊಲೀಸರನ್ನು ಮನೆಗಳಿಗೇ ನುಗ್ಗಿ ಗುಂಡಿಟ್ಟು ಕೊಂದ ಘಟನೆಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಅವರು ಕಿಡಿಕಾರಿದ್ದಾರೆ.ಜಮ್ಮು-ಕಾಶ್ಮೀರದಲ್ಲಿ ಅನಾಗರಿಕ ಕೃತ್ಯಗಳನ್ನು ಪ್ರಚೋದಿಸುತ್ತಿರುವ ಪಾಕಿಸ್ತಾನ ಸೇನೆ ಹಾಗೂ ಉಗ್ರರಿಗೆ ತಿರುಗೇಟು ನೀಡುವ ಸಮಯ ಇದೀಗ ಒದಗಿ ಬಂದಿದೆ ಎಂದು ರಾವತ್‌ ಅವರು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾವತ್‌ ಅವರು, ‘ಕಣಿವೆ ರಾಜ್ಯದಾದ್ಯಂತ ಬರ್ಬರ ಕೃತ್ಯಗಳನ್ನು ಎಸಗುತ್ತಿರುವ ಪಾಕಿಸ್ತಾನ ಸೇನೆ ಹಾಗೂ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಮಯ ಬಂದಿದೆ. ಆದರೆ, ಅವರು ಹಿಡಿದ ಅನಾಗರಿಕ ಮಾರ್ಗ ನಾವು ಹಿಡಿಯುವುದಿಲ್ಲ. ಆದಾಗ್ಯೂ, ಅವರಿಗೆ ತಕ್ಕ ಪ್ರತಿಕ್ರಿಯೆ ನೀಡಲಾಗುತ್ತದೆ,’ ಎಂದು ಪಾಕಿಸ್ತಾನದ ವಿರುದ್ಧ ಗುಡುಗಿದರು.

ಇನ್ನು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಜೊತೆಗಿನ ಮಾತುಕತೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಭಯೋತ್ಪಾದನೆ ಹಾಗೂ ಶಾಂತಿ ಮಾತುಕತೆ ಒಟ್ಟಾಗಿ ನಡೆಯಲು ಸಾಧ್ಯವಿಲ್ಲ ಎಂದರು. ಈ ಮೂಲಕ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಜೊತೆ ಮಾತುಕತೆ ರದ್ದುಗೊಳಿಸಿದ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು. ಅಲ್ಲದೆ, ಪಾಕಿಸ್ತಾನ ಮೊದಲು ಭಯೋತ್ಪಾದನೆಯನ್ನು ಬುಡಮೇಲು ಮಾಡಬೇಕು ಎಂದು ಆಗ್ರಹಿಸಿದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search