ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ..!!!
Posted On September 24, 2018
0

ಉಡುಪಿ-ಖಾಸಗಿ ಶಿಪ್ ನ ಮಾಜಿ ಉದ್ಯೋಗಿಯೊಬ್ಬರು ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದಲ್ಲಿ ನಡೆದಿದೆ.ಒಲಿವೆರಾ ಲೂಯಿಸ್ 68. ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡವರು.ನಿನ್ನೆ ತಡ ರಾತ್ರಿ ಮಣಿಪಾಲದ ಸಂಬಂಧಿಕರ ಮನೆಯ ಸಮೀಪ ತಮ್ಮ ಫೋರ್ಡ್ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತ್ನಿಗೆ ಡೆತ್ ನೋಟ್ ಬರೆದಿರುವ ಒಲಿವೆರಾ ಲೂಯಿಸ್,ನನ್ನ ಸಾವಿಗೆ ನಾನೇ ಕಾರಣ.ಮಕ್ಕಳನ್ನು ಚೆನ್ನಾಗಿ ನೋಡಿಕೋ ಎಂದು ಬರೆದಿದ್ದಾರೆ.ಲೂಯಿಸ್ ,ಲಕ್ಷ್ಮೀಂದ್ರನಗರ ನಿವಾಸಿಯಾಗಿದ್ದಾರೆ.ಕಳೆದ ಕೆಲ ವರ್ಷಗಳಿಂದ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಇತ್ತೀಚಿನ ದಿನಗಳಲ್ಲಿ ತೀರ್ವ ಖಿನ್ನತೆಗೂ ಒಳಗಾಗಿದ್ದರು. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರ್ಗಿ ,ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
September 17, 2025