ಪೃಥ್ವಿ ಶಾ ಮೊದಲ ಪಂದ್ಯದಲ್ಲಿಯೇ ಶೈನಿಂಗ್..!
Posted On October 4, 2018
ರಾಜ್’ಕೋಟ್: ಮುಂಬೈನ ಯುವ ಪ್ರತಿಭೆ ಚೊಚ್ಚಲ ಪಂದ್ಯದಲ್ಲಿಯೇ ಸ್ಫೋಟಕ ಶತಕ ಸಿಡಿಸುವ ಮೂಲಕ ಅಂತರಾಷ್ಟ್ರೀಯ ವೃತ್ತಿಜೀವನದ ಆರಂಭವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.
ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಚಾಂಪಿಯನ್ ಪಟ್ಟದತ್ತ ಮುನ್ನಡೆಸಿದ್ದ ಪೃಥ್ವಿ ಶಾ, ಇದೀಗ ಪದಾರ್ಪಣ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ ಮೊದಲ ಕಿರಿಯ ಬ್ಯಾಟ್ಸ್’ಮನ್ ಎನ್ನುವ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಕೇವಲ 99 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್’ನಲ್ಲಿ ಚೊಚ್ಚಲ ಪಂದ್ಯದಲ್ಲೇ ಅತಿವೇಗವಾಗಿ ಶತಕ ಸಿಡಿಸಿದ ವಿಶ್ವದ ಮೂರನೇ ಹಾಗೂ ಭಾರತದ ಎರಡನೇ ಬ್ಯಾಟ್ಸ್’ಮನ್ ಎನ್ನುವ ಗೌರವಕ್ಕೂ ಪಾತ್ರರಾಗಿದ್ದಾರೆ.
- Advertisement -
Leave A Reply