ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು…!
Posted On October 7, 2018
0

ಮಂಗಳೂರು-ಕೆಎಸ್ ಆರ್ ಟಿಸಿ ಬಸ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಕ್ರಿಬೆಟ್ಟುವಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು .ಮಂಗಳೂರಿನ ಕುಡುಪು ನಿವಾಸಿ ಚರಣ್ (18), ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮಹಮದ್ ನೌಶಾದ್ (18) ವೃತ ದುರ್ದೈವಿಗಳು.
ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸರಕಾರಿ ಬಸ್ ರಾಂಗ್ ಸೈಡ್ ಗೆ ಬಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಬಸ್ ನ ಅಡಿಯಲ್ಲಿ ಸಿಲುಕಿ ಸಾವನ್ನಪಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending Now
ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
August 30, 2025
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
August 30, 2025