• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!

TNN Correspondent Posted On October 8, 2018


  • Share On Facebook
  • Tweet It

ನವದೆಹಲಿ: ಗಲಭೆ ಹಾಗೂ ದೊಂಬಿಯಂತಹ ಸಮಯದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗೆಂದೇ ಇರುವ ಕ್ಷಿಪ್ರ ಕಾರ್ಯಪಡೆ(ಆರ್‌ಎಎಫ್) ತುಕಡಿಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಸದ್ಯ ದೇಶದಲ್ಲಿರುವ ಒಟ್ಟು 10 ಆರ್‌ಎಎಫ್ ತುಕಡಿಗಳ ಪೈಕಿ, 5 ಹೊಸ ತುಕಡಿಗಳನ್ನು ಆಯೋಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ ಜನವರಿಯಲ್ಲೇ 5 ಆರ್‌ಎಎಫ್ ಘಟಕವನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಆದರೆ ಈಗ ಎಲ್ಲಿ ಸ್ಥಾಪನೆಯಾಗಲಿದೆ ಎನ್ನುವ ವಿವರವನ್ನು ಪ್ರಕಟಿಸಿದೆ.ಕರ್ನಾಟಕದ ಮಂಗಳೂರು, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಉತ್ತರಪ್ರದೇಶದ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರ ಹಾಜಿಪುರ ಮತ್ತು ಹರಿಯಾಣದ ನುಹ್ ಜಿಲ್ಲೆಗಳಲ್ಲಿ ಹೊಸ ಆರ್‌ಎಎಫ್ ಘಟಕ ಪ್ರಾರಂಭವಾಗಲಿದೆ.

 

ಘಟಕ ಸ್ಥಾಪನೆ ಸಂಬಂಧ ಪಟ್ಟಂತೆ ಅಗತ್ಯವಾದ ಜಾಗ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಕಾರ್ಯಚರಣೆ ನಡೆಸುತ್ತಿರುವ ಆರ್‌ಎಎಫ್ ಸಿಬ್ಬಂದಿಗಳು ಶೀಘ್ರವೇ ಹೊಸ ನೆಲೆಗಳಿಗೆ ವರ್ಗಾವಣೆಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಈಗಾಗಲೇ ದೇಶದ ಹೈದರಾಬಾದ್, ಅಹಮದಾಬಾದ್, ಅಲಹಾಬಾದ್, ಮುಂಬೈ, ದೆಹಲಿ, ಆಲಿಘರ್, ಕೊಯಮತ್ತೂರ್, ಜಮ್ಶೆಡ್‍ಪುರ್, ಭೋಪಾಲ್ ಹಾಗೂ ಮೀರತ್ ಪ್ರದೇಶಗಳಲ್ಲಿ ಆರ್‌ಎಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿವೆ.

ಏನಿದು ಆರ್‌ಎಎಫ್?
ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಅರ್ಥಾತ್ ಕ್ಷಿಪ್ರ ಕಾರ್ಯಾಚರಣೆ ಪಡೆ. ದೊಂಬಿ, ಗಲಭೆ ಸೇರಿದಂತೆ ಮತ್ತಿತರ ತುರ್ತು ಪರಿಸ್ಥಿತಿಯನ್ನು ನಿರ್ವಹಿಸಲು ವಿಶೇಷ ತರಬೇತಿ ಹೊಂದಿದ ಅರೆಸೇನಾಪಡೆ ಘಟಕ. ಇಲ್ಲಿಯವರೆಗೂ ದೇಶದಲ್ಲಿ ಒಟ್ಟು 10 ಆರ್‌ಎಎಫ್ ತುಕಡಿಗಳಿವೆ. ಪ್ರತಿ ತುಕಡಿಯಲ್ಲಿ 1,000 ಸಿಬ್ಬಂದಿಗಳಿದ್ದು, ಅವರು ಅತ್ಯಾಧುನಿಕ ತಾಂತ್ರಿಕ ಉಪಕರಣಗಳು, ಮಾರಕವಲ್ಲದ ಶಸ್ತ್ರಾಸ್ತ್ರಗಳು, ಹೊಗೆಸೂಸುವ ಗ್ರೆನೇಡ್‍ಗಳು ಹಾಗೂ ಇನ್ನೂ ಮುಂತಾದ ತುರ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ.

ಮಂಗಳೂರಿನಲ್ಲಿ ಏಲ್ಲಿ?
ಮಂಗಳೂರಿನಲ್ಲಿ ಎಲ್ಲಿ ಎನ್ನುವುದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆರ್‌ಎಎಫ್ ಸ್ಥಾಪನೆ ಸಂಬಂಧ ಈ ಹಿಂದೆ ಬಜಪೆ ಮತ್ತು ಪರವೂರಿನಲ್ಲಿ ಜಾಗ ಗುರುತಿಸಿ 2 ವರ್ಷದ ಹಿಂದೆ ಸರ್ಕಾರ ಪ್ರಸ್ತಾವನೆ ಕಳುಹಿಸಲಾಗಿದೆ. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಹೇಳಿದ್ದಾರೆ.

  • Share On Facebook
  • Tweet It


- Advertisement -
#mangalorecitypolice


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Tulunadu News September 15, 2023
You may also like
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
ವಿಶ್ವಹಿಂದೂ ಪರಿಷತ್ ಮುಖಂಡನಿಗೆ ತಲವಾರು ದಾಳಿ..! ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರ ದಂಡು..
September 25, 2018
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search