ಆಂಬುಲೆನ್ಸ್ ನಲ್ಲಿ ಹಣ್ಣು ಮಗುವಿಗೆ ಜನ್ಮ ನೀಡಿದ ತಾಯಿ…!!
Posted On October 20, 2018
0
ಬೆಳ್ತಂಗಡಿ-ಬೆಳ್ತಂಗಡಿ ನಿನ್ನೆ ಅಪರೂಪದ ಕ್ಷಣಕ್ಕೆ ಸಾಕ್ಷಿ ಆಯಿತು.ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆಯೇ ಅಂಬುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಉಜಿರೆಯಲ್ಲಿ ನಡೆದಿದೆ.ಬೆಳ್ತಂಗಡಿ ಪುಂಜಾಲಕಟ್ಟೆ ವ್ಯಾಪ್ತಿಯ ಮಾಲಾಡಿ ಗ್ರಾಮದ ತುಂಬು ಗರ್ಭಿಣಿ ವಿನುತ ವೇಗಸ್ ಮಗುವಿಗೆ ಜನ್ಮ ನೀಡಿದ ಮಹಿಳೆ.

ವಿನುತ ವೇಗಸ್ ಅವರಿಗೆ ತೀವ್ರ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ಅವರನ್ನು ಉಜಿರೆಯ 108 ಅಂಬುಲೆನ್ಸ್ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ದಾರಿ ಮದ್ಯೆ ವಿಪರೀತ ನೋವು ಕಾಣಿಸಿಕೊಂಡಿದ್ದು, ಅಂಬುಲೆನ್ಸ್ ಇ.ಯಂ.ಟಿ ಡೆನ್ನಿಸ್ ಅವರು ಹೆರಿಗೆ ಮಾಡಿಸಲು ಮುಂದಾಗಿದ್ದು, ಅದರಲ್ಲಿ ಯಶಸ್ಸು ಕಂಡಿದ್ದಾರೆ.ವಿನುತಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಳಿಕ ತಾಯಿ ಹಾಗು ಮಗುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸುರಕ್ಷಿತವಾಗಿ ತಲುಪಿಸಲಾಗಿದೆ.
Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









