ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
Posted On October 23, 2018
0
ರಾಂಚಿ: 2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಮಧ್ಯೆ ಪ್ರಮುಖ ರಾಜಕೀಯ ಪಕ್ಷಗಳು ಮತ್ತೆ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದು ಗೆಲ್ಲುವ ಕುದುರೆಗಳಿಗೆ ಮಣೆ ಹಾಕುತ್ತಿವೆ.

ಸಂಸದೆ ಮೀನಾಕ್ಷಿ ಲೇಖಿ ಬದಲಿಗೆ ದೆಹಲಿಯಿಂದ ಗೌತಮ್ ಗಂಭೀರ್ ರನ್ನು ಈ ಬಾರಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಗಂಭೀರ್ ನವದೆಹಲಿ ರಾಜೇಂದ್ರ ನಗರದ ನಿವಾಸಿಯಾಗಿದ್ದು ಹೆಚ್ಚು ಜನಪ್ರಿಯ ಸಹ ಆಗಿದ್ದಾರೆ.
Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
December 9, 2025









