ನವೆಂಬರ್ 10 ಉಡುಪಿ ಬಂದ್ ಗೆ ಕರೆ..!!! ಯಾಕೆ ಗೊತ್ತೇ..!!?
Posted On November 1, 2018
0
ಉಡುಪಿ-ಉಡುಪಿ ಜಿಲ್ಲೆಯಲ್ಲಿನ ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ನವೆಂಬರ್ 10 ರಂದು ಉಡುಪಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮರಳಿಗಾಗಿ ಹೋರಾಟ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಮುಂಭಾಗ ಹಗಲು-ರಾತ್ರಿ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಪತ್ರಕರ್ತ ಪ್ರಶ್ನೆಗೆ ಉತ್ತರಿಸಿದ ಅವರು, ನ. 8 ರಂದು ಜಿಲ್ಲೆಯಲ್ಲಿ ನೀತಿಸಂಹಿತೆ ಮುಕ್ತಾಯಗೊಳ್ಳಲಿದ್ದು. ಆ ಬಳಿಕ ಅಂದರೆ ನವೆಂಬರ್ 10ರಂದು ಉಡುಪಿ ಜಿಲ್ಲೆಯಾದ್ಯಂತ ಬಂದ್ ಆಚರಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ ಸಿಆರ್‌ಝಡ್ ಮತ್ತು ನಾನ್‌ಸಿಆರ್‌ಝಡ್‌ನ ಎಲ್ಲ ದಿಬ್ಬಗಳಲ್ಲಿ ಮರಳುಗಾರಿಕೆ ಆರಂಭಿಸಬೇಕೆಂದು ಆಗ್ರಹಿಸಿ ಮರಳಿಗಾಗಿ ಹೋರಾಟ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಹಗಲು-ರಾತ್ರಿ ಅನಿರ್ದಿಷ್ಟಾವಧಿ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಹೀಗಾಗಿ ಉಡುಪಿ ಬಂದ್ ಗೆ ಕರೆ ನೀಡಲಾಗಿದೆ ಎಂದರು.
Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
January 12, 2026









