• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!

TNN Correspondent Posted On November 3, 2018
0


0
Shares
  • Share On Facebook
  • Tweet It

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ, ಜನರ ಭಾವನೆಗಳನ್ನು ಅರಿಯುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ತಕ್ಷಣಕ್ಕೆ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಇದೇ ವೇಳೆ ಪ್ರತ್ಯೇಕವಾಗಿ ರಾಜ್ಯವಾರು ಸಮೀಕ್ಷೆಯನ್ನೂ ನಡೆಸಲಾಗಿದ್ದು, ಅದರನ್ವಯ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೆ ಅವುಗಳಿಗೆ 16 ಸ್ಥಾನ ಲಭ್ಯವಾಗಲಿದೆ. ಬಿಜೆಪಿ ಕೇವಲ 12 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ ಎಂದು ಹೇಳಿದೆ.

ಖಾಸಗಿ ಸುದ್ದಿ ವಾಹಿನಿ ನಡೆಸಿದ ಸಮೀಕ್ಷೆ ಯಲ್ಲಿ ಈ ಮಾಹಿತಿ ಸಿಕ್ಕಿದೆ.

ಮೈತ್ರಿ ಸರ್ಕಸ್‌: ಕಳೆದ ಲೋಸಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನ ಗೆದ್ದುಕೊಂಡಿದ್ದವು. ಬಿಜೆಪಿ 17 ಸ್ಥಾನ ಗೆದ್ದಿತ್ತು. ಈ ಬಾರಿಯೂ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದಲ್ಲಿ, ಕಾಂಗ್ರೆಸ್‌ 7 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಆದರೆ ಜೆಡಿಎಸ್‌ 1 ಸ್ಥಾನ ಹೆಚ್ಚು ಗೆಲ್ಲುವ ಮೂಲಕ ತನ್ನ ಬಲವನ್ನು 3ಕ್ಕೆ ಏರಿಸಿಕೊಳ್ಳಲಿದೆ. ಮತ್ತೊಂದೆಡೆ ಬಿಜೆಪಿ ಕಳೆದ ಬಾರಿಗಿಂತ 1 ಸ್ಥಾನ ಹೆಚ್ಚು ಗೆಲ್ಲುವ ಮೂಲಕ ತನ್ನ ಬಲವನ್ನು 18ಕ್ಕೆ ಹೆಚ್ಚಿಸಿಕೊಳ್ಳಲಿದೆ. ಕಾಂಗ್ರೆಸ್‌ ಶೇ.37.6ರಷ್ಟು, ಬಿಜೆಪಿ ಶೇ.44.3ರಷ್ಟು, ಜೆಡಿಎಸ್‌ ಶೇ.12.4 ರಷ್ಟುಮತ್ತು ಇತರರು ಶೇ.5.7ರಷ್ಟುಮತ ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಮೈತ್ರಿಗೆ ಬಲ:

ಒಂದು ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದಾಗಿ ಸ್ಪರ್ಧಿಸಿದಲ್ಲಿ ಅವುಗಳಿಗೆ 16 ಸ್ಥಾನ ಲಭ್ಯವಾಗಲಿದೆ. ಅಂದರೆ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಸಿಗಬಹುದಾದ 6 ಸ್ಥಾನ ಹೆಚ್ಚು ಸಿಗಲಿದೆ. ಇದೇ ವೇಳೆ ಬಿಜೆಪಿ ಕೇವಲ 12 ಸ್ಥಾನಕ್ಕೆ ತೃಪ್ತಿಪಟ್ಟುಬೇಕಾಗಿ ಬರಲಿದೆ. ಇದು ಕಳೆದ ಬಾರಿ ಗೆದ್ದಿದ್ದಕ್ಕಿಂತ 5 ಸ್ಥಾನ ಕಡಿಮೆ ಎಂದು ಸಮೀಕ್ಷೆ ಹೇಳಿದೆ.

ಮೈತ್ರಿ ಆಗದಿದ್ದಲ್ಲಿ

ಒಟ್ಟು ಸ್ಥಾನ 28

ಪಕ್ಷ 2014 ಈಗ

ಬಿಜೆಪಿ 17 18

ಕಾಂಗ್ರೆಸ್‌ 09 07

ಜೆಡಿಎಸ್‌ 02 03

ಮೈತ್ರಿ ಆದರೆ

ಪಕ್ಷ 2014 ಈಗ

ಬಿಜೆಪಿ 17 12

ಕಾಂಗ್ರೆಸ್‌+ ಜೆಡಿಎಸ್‌ 11 16

ಕೈ-ದಳ ದೋಸ್ತಿಯಿಂದ ಬಿಜೆಪಿಗೆ ಸಂಕಷ್ಟ!

ರಾಜ್ಯದಲ್ಲಿ ಮೈತ್ರಿ ಆದರೆ ಕಾಂಗ್ರೆಸ್‌-ಜೆಡಿಎಸ್‌ಗೆ 16, ಬಿಜೆಪಿಗೆ 12 ಸೀಟು

ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಬಿಜೆಪಿ 18, ಕಾಂಗ್ರೆಸ್‌ 7, ಜೆಡಿಎಸ್‌ 3

ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ?

ಲೋಕಸಭಾ ಸ್ಥಾನ: 543 ಬಹುಮತಕ್ಕೆ: 272

ಮೈತ್ರಿಕೂಟ ರಿಪಬ್ಲಿಕ್‌ ಎಬಿಪಿ 2014

ಎನ್‌ಡಿಎ 261 300 336

ಯುಪಿಎ 119 116 60

ಇತರೆ 163 127 147

0
Shares
  • Share On Facebook
  • Tweet It


#PMMODI


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
October 23, 2018
ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search