• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನರಿಗೆ ಹೆದರಿ ಓಡಿ ಹೋದ ರಮ್ಯ…!!!

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಡ್ಯ: ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಮಾಜಿ ಸಂಸದೆ ರಮ್ಯಾ, ರಾತ್ರೋ ರಾತ್ರಿ ಮಂಡ್ಯದಿಂದ ಮನೆ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.

ಈ ಪ್ರಶ್ನೆಗೆ ಉತ್ತರ ಎನ್ನುವಂತೆ ತಡರಾತ್ರಿ ಮಂಡ್ಯದ ವಿದ್ಯಾನಗರದಲ್ಲಿರುವ ರಮ್ಯಾ ಅವರ ಮನೆಗೆ ಬಂದ ಎರಡು ಲಾರಿಗಳಿಗೆ  ಮನೆಯ ವಸ್ತುಗಳನ್ನು ತುಂಬುತ್ತಿರುವ ದೃಶ್ಯ  ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ರಮ್ಯಾ, ಸದ್ದಿಲ್ಲದೆ ಮಂಡ್ಯದಿಂದ ಮನೆ ಖಾಲಿ ಮಾಡಿ ವರ್ಷಗಟ್ಟಲೇ ಈ ಕಡೆ ತಲೆ ಹಾಕಲೇ ಇಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು. ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕನಸು ಕಂಡಿದ್ದ ರಮ್ಯಾ ಅವರಿಗೆ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಿಸಿತುಪ್ಪವಾಗಿ ಪರಿಣಮಿಸಿತ್ತು.

ಇತ್ತೀಚೆಗೆ ನಡೆದ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿ, ಕಾಂಗ್ರೆಸ್ ಪಕ್ಷ ಜೆಡಿಎಸ್‍ಗೆ ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟಿತ್ತು. ಅದರಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಜೆಡಿಎಸ್‍ಗೆ ಬಿಟ್ಟುಕೊಡುವುದು ಬಹುತೇಕ ಖಚಿತವಾಗಿದೆ

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ ಅಂಬರೀಶ್ ಅವರು ಮೃತಪಟ್ಟಾಗಲೂ ಅವರ ಅಂತಿಮ ದರ್ಶನ ಪಡೆಯಲು ರಮ್ಯಾ ಮಂಡ್ಯಕ್ಕೆ ಬರಲಿಲ್ಲ. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು. ಈ ಎಲ್ಲ ಬೆಳವಣಿಗೆ ನಡುವೆಯೇ ರಾತ್ರೋರಾತ್ರಿ ರಮ್ಯಾ ಅವರ ಮನೆಯಲ್ಲಿದ್ದ ವಸ್ತುಗಳನ್ನು ಎರಡು ಲಾರಿಗಳ ಮೂಲಕ ಹೊರಗೆ ಸಾಗಿಸಲಾಗುತ್ತಿದೆ. ಇದೆಲ್ಲವನ್ನು ನೋಡಿದರೆ ಮಂಡ್ಯದಲ್ಲಿ ನನಗಿನ್ನು ರಾಜಕೀಯವಾಗಿ ಭವಿಷ್ಯವಿಲ್ಲ ಎಂದು ಶಾಶ್ವತವಾಗಿ ರಮ್ಯಾ ಮಂಡ್ಯ ತೊರೆಯುತ್ತಿದ್ದಾರೆ ಎಂಬ ಚರ್ಚೆ ಜಿಲ್ಲೆಯಲ್ಲಿ ಶುರುವಾಗಿದೆ.

0
Shares
  • Share On Facebook
  • Tweet It


ramya


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಕಾಂಗ್ರೆಸ್ ಯುವರಾಜನಿಗೆ ಮತ್ತೆ ರಮ್ಯಾ ಕೃಪೆಯಿಂದ ಟ್ವೀಟ್ ಮುಖಭಂಗ!
November 2, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?
October 22, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search