• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಗೆ 5.7 ಕೋಟಿ ಮಂಜೂರು

Tulunadu News Posted On December 5, 2018
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಎಂಆರ್ ಪಿಎಲ್-ಒಎನ್ ಜಿಸಿ ಕಂಪೆನಿಗೆ ಲಿಖಿತವಾಗಿ ಮನವಿ ಮಾಡಿ ಆ ಬಗ್ಗೆ ಸತತ ಪ್ರಯತ್ನ ಮಾಡಿದ್ದರ ಫಲವಾಗಿ ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಹೆಚ್ಚುವರಿ ಆರ್ಥಿಕ ಸಹಾಯ ಸಿಕ್ಕಿದೆ.

ಎಂಆರ್ ಪಿಎಲ್- ಒನ್ ಜಿಸಿ ಕಂಪೆನಿಯು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ತನ್ನ ಸಾಮಾಜಿಕ ಬದ್ಧತಾ ನಿಧಿಯ ಅಡಿಯಲ್ಲಿ ಹಣ ನೀಡಿತ್ತು. ಆ ಮೂಲಕ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡದ ನಿರ್ಮಾಣವಾಗಿದೆ. ಆದರೆ ಅಲ್ಲಿ ಮೂಲಭೂತ ಅಗತ್ಯಗಳಾದ ಯಂತ್ರೋಪಕರಣಗಳು ಮತ್ತು ಪೀಠೋಪಕರಣಗಳ ಖರೀದಿಗೆ ಆರ್ಥಿಕ ಸಂಪನ್ಮೂಲದ ಅವಶ್ಯಕತೆ ಇತ್ತು. ಅದರಿಂದ ವೈದ್ಯಾಧಿಕಾರಿಗಳು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ಅವರು ಶಾಸಕರಾಗಿ ಆಯ್ಕೆಯಾದ ತಕ್ಷಣ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಆಗಬೇಕಾದ ಕಾರ್ಯಗಳ ಬಗ್ಗೆ ಆದ್ಯತೆಯಲ್ಲಿ ಕ್ರಮ ಕೈಗೊಂಡರು. ಎಂಆರ್ ಪಿಎಲ್-ಒಎನ್ ಜಿಸಿಯ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ, ಮಂಗಳೂರು ಮಾತ್ರವಲ್ಲ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಬಡ, ಮಧ್ಯಮ ವರ್ಗದ ಮಹಿಳೆಯರ ಆಶಾಕಿರಣವಾಗಿರುವ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಪೀಠೋಪಕರಣಗಳಿಗಾಗಿ ಬೇಕಾಗಿರುವ ಹಣದ ಅವಶ್ಯಕತೆಯನ್ನು ಮನಗಾಣಿಸಿದರು. ಅದರಂತೆ ಸಂಸದರ ಹಾಗೂ ಶಾಸಕರ ಬೇಡಿಕೆಯನ್ನು ಸ್ವೀಕರಿಸಿದ ಕಂಪೆನಿ 5.7 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದೆ. ಈ ಹಣ ಮುಂದಿನ ದಿನಗಳಲ್ಲಿ ಲೇಡಿಗೋಶನ್ ಆಸ್ಪತ್ರೆಯ ಸರ್ವಾಂಗಿಣ ಅಭಿವೃದ್ಧಿಗೆ ಸಹಾಯವಾಗಲಿದೆ.

ಈ ಬಗ್ಗೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಲೇಡಿಗೋಶನ್ ಆಸ್ಪತ್ರೆ ಮುಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದ ಮಹಿಳೆಯರಿಗೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಲು ಕೆಲವು ತೊಂದರೆ ಇತ್ತು. ಅದನ್ನು ನಿವಾರಿಸುವುದಕ್ಕಾಗಿ ಎಂಆರ್ ಪಿಎಲ್-ಒನ್ ಜಿಸಿ ಅಧಿಕಾರಿಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ನಾನು ಪ್ರಯತ್ನಿಸಿದರ ಕಾರಣದಿಂದ ಈಗ ಫಲ ಸಿಕ್ಕಿದೆ. ಅವರು ನಮ್ಮ ಮನವಿಯನ್ನು ಪರಿಗಣಿಸಿ 5.7 ಕೋಟಿ ರೂಪಾಯಿಯನ್ನು ಲೇಡಿಗೋಶನ್ ಆಸ್ಪತ್ರೆಗೆ ನೀಡಿದ್ದಕ್ಕೆ ಸಂಸದರ ಪರವಾಗಿ ಮತ್ತು ಶಾಾಸಕನ ನೆಲೆಯಲ್ಲಿ ಮತ್ತು ಬಡಜನರ ಪರವಾಗಿ ಅನಂತ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

 

0
Shares
  • Share On Facebook
  • Tweet It


vedavyas kamath


Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
You may also like
ರಾಷ್ಟ್ರೀಯ ಕ್ರೀಡಾಪಟುವಿಗೆ 2 ಲಕ್ಷ ರೂ ಧನ ಸಹಾಯ ನೀಡಿದ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್!
October 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
ಮೊಯಿಲಿ ಪುತ್ರವಾತ್ಸಲ್ಯ ಕಾಂಗ್ರೆಸ್ ಜಾತಕ ಬಯಲಿಗೆ ತಂದು ಸಿದ್ದು ಕ್ಯಾಪೆಸಿಟಿ ತೋರಿಸಿತು!
March 21, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search