ಎನ್ಕೌಂಟರ್ ವೇಳೆ ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: 7 ನಾಗರೀಕರ ಸಾವು
Posted On December 15, 2018
0
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಹೊಡೆದುರಳಿಸಲಾಗಿದೆ. ಇದೇ ವೇಳೆ ಸಂಭವಿಸಿದ ಘರ್ಷಣೆಯಲ್ಲಿ ಯೋಧರ ಗುಂಡಿಗೆ 7 ನಗರೀಕರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.
ಪುಲ್ವಾಮಾ ಜಿಲ್ಲೆಯ ಸಿರ್ನೊ ಗ್ರಾಮದಲ್ಲಿ ಉಗ್ರರ ಗುಂಡಿಗೆ ಯೋಧನೊಬ್ಬ ಹುತಾತ್ಮನಾಗಿದ್ದ. ಈ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿದ ಸೇನೆ ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಯಿತು.
ಇದೇ ವೇಳೆ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ನಡೆಸಿದ್ದರಿಂದ ಆಕ್ರೋಶಗೊಂಡ ನಾಗರೀಕರು ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಇದು ವಿಕೋಪಕ್ಕೆ ತಿರುಗಿದ್ದರಿಂದ ಯೋಧರು ಪ್ರತಿಭಟನಾ ನಿರತರ ಮೇಲೆ ದಾಳಿ ನಡೆಸಿದ್ದು 7 ಮಂದಿ ಮೃತಪಟ್ಟಿದ್ದಾರೆ.
Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
December 9, 2025









