ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ನಝೀರ್ ವರ್ಗಾವಣೆ!
Posted On March 14, 2019
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಯುಕ್ತರಾಗಿದ್ದ ಮೊಹಮ್ಮದ್ ನಝೀರ್ ಅವರನ್ನು ವರ್ಗಾಯಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಕರ್ತವ್ಯದಲ್ಲಿದ್ದರು. ಅವರನ್ನು ಉಡುಪಿ ನಗರಾಭಿವೃದ್ಧಿ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ಸ್ಮಾರ್ಟ್ ಸಿಟಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಮಂಗಳೂರಿಗೆ ಐಎಎಸ್ ಶ್ರೇಣಿಯ ಅಧಿಕಾರಿ ಆಯುಕ್ತರಾಗಿ ಬರಬೇಕೆಂಬ ಕೂಗು ನಾಗರಿಕ ವಲಯದಿಂದ ಕೇಳಿಬಂದಿತ್ತು. ಮೊಹಮ್ಮದ್ ನಝೀರ್ ಅವರು ಬಿಇ ಪದವೀಧರರಾಗಿದ್ದು, ಕೆಎಎಸ್ ಶ್ರೇಣಿಯ ಅಧಿಕಾರಿಯಾಗಿಲ್ಲದೇ ಇರುವುದು ಕೂಡ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗಿತ್ತು. ಕಾಂಗ್ರೆಸ್ ಹಿರಿಯ ರಾಜಕಾರಣಿಯೊಬ್ಬರ ಹತ್ತಿರದ ಸಂಬಂಧಿಯಾಗಿರುವುದರಿಂದ ನಝೀರ್ ಅವರು ಕಮೀಷನರ್ ಆಗಿ ಸುಧೀರ್ಘ ಅವಧಿಗೆ ಪಾಲಿಕೆಯಲ್ಲಿ ಇರುವಂತಾಯಿತು ಎಂದು ಹೇಳುವವರಿದ್ದಾರೆ.
- Advertisement -
Trending Now
ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!
January 14, 2025
Leave A Reply