• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ಆರೋಪಿಗಳ ಸೆರೆ!

Tulunadu News Posted On February 10, 2020
0


0
Shares
  • Share On Facebook
  • Tweet It

ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ಮುಂಬೈಯಿಂದ ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಐಷಾರಾಮಿ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ

1. ಮೊಹಮ್ಮದ್ ಶರೀಫ್ ಸಿದ್ದಿಕ್, ಪ್ರಾಯ(40), ತಂದೆ: ಪಿ ಮೊಹಮ್ಮದ್, ವಾಸ: ಸೈಟ್ ನಂಬ್ರ: 151/2, ಚೊಕ್ಕಬೆಟ್ಟು, ಸುರತ್ಕಲ್, ಮಂಗಳೂರು.

2. ಮೊಹಮ್ಮದ್ ಶಾಫಿ @ ಚಪ್ಪಿ, ಪ್ರಾಯ(33), ತಂದೆ: ದಿ: ಅಬ್ದುಲ್ ಖಾದರ್, ವಾಸ: ಡೋರ್ ನಂಬ್ರ: ಜಿಎಲ್-2/478, 2 ನೇ ಬ್ಲಾಕ್, ಕಾಟಿಪಳ್ಳ, ಸುರತ್ಕಲ್, ಮಂಗಳೂರು.

3. ಮೊಹಮ್ಮದ್ ಅನಾಸ್,, ಪ್ರಾಯ(27), ತಂದೆ: ಅಹಮ್ಮದ್, ವಾಸ: 3-48, 2 ನೇ ಬ್ಲಾಕ್, ಕಾಟಿಪಳ್ಳ, ಜುಮ್ಮಾ ಮಸೀದಿ ಬಳಿ, ಕೈಕಂಬ ಅಂಚೆ, ಮಂಗಳೂರು.

ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 87,560/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 3 ಮೊಬೈಲ್ ಫೋನ್ ಗಳು, ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಐಷಾರಾಮಿ ಬಿಎಂಡಬ್ಲೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಿಎಂಡಬ್ಲೂ ಕಾರಿನ ಒಟ್ಟು ಮೌಲ್ಯ 51,12,560/- ಲಕ್ಷ ಆಗಬಹುದು. ಆರೋಪಿಗಳು ಮುಂಬೈಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.

ಆರೋಪಿಗಳ ಪೈಕಿ ಮೊಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಶಾಫಿ @ ಚಪ್ಪಿ ಎಂಬಾತನ ವಿರುದ್ದ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಅನಾಸ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಮಾನ್ಯ ಪೊಲೀಸ್ ಆಯುಕ್ತರಾದ ಡಾ: ಹರ್ಷ ಐ.ಪಿ.ಎಸ್, ಮಾನ್ಯ ಪೊಲೀಸ್ ಉಪ ಆಯುಕ್ತರವರಾದ ಶ್ರೀ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿಎಸ್ಐಯವರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಪೊಲೀಸ್ ಠಾಣೆಯ ಪಿಎಸ್ಐ ಲತಾ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search