• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ

Tulunadu News Posted On June 30, 2021
0


0
Shares
  • Share On Facebook
  • Tweet It

 

ಒಟ್ಟು ಮೂವರಿಗೆ ಗೌರವ ಪ್ರಶಸ್ತಿ; ಆರು ಮಂದಿಗೆ ಗೌರವ ಪುರಸ್ಕಾರ ಪ್ರಕಟ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರ ಘೋಷಣೆ ಬಗ್ಗೆಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಗೌರವ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ.

ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿಯು 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಈ ಗೌರವ ಪ್ರಶಸ್ತಿಯು ರೂ.50000 ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ. ಕೋರೋನದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಎಲ್ಲವೂ ಸಹಜ ಸ್ಥಿತಿಗೆ ಮರಳಿದ ನಂತರ ಸನ್ಮಾನ್ಯ ಮುಖ್ಯಮಂತ್ರಿಗಳ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿಕೊಂಡು, ಇವರೆಲ್ಲರ ಉಪಸ್ಥಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಈ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿಯ ಅಧ್ಯಕ್ಷರಾದ ರಹೀಂ ಉಚ್ಚಿಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದ್ಮಶ್ರೀ ಸೇರಿದಂತೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಎಲ್ಲಾ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದರೂ, ಸ್ವತ: ಬ್ಯಾರಿ ಭಾಷಿಕರಾಗಿರುವ ಹರೇಕಳ ಹಾಜಬ್ಬರವರಿಗೆ ಈ ತನಕ ಅಕಾಡೆಮಿಯ ಪ್ರಶಸ್ತಿ ದೊರಕದೇ ಇರುವುದು ವಿಷಾದನೀಯ ಎಂದು ತಿಳಿಸಿದ ರಹೀಂ ಉಚ್ಚಿಲರವರು, ಈ ಬಾರಿಯು ಆ ಕೊರಗನ್ನು ನಿವಾರಿಸಿದ ಸಂತೃಪ್ತಿಯು ನಮಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಗೌರವ ಪ್ರಶಸ್ತಿ -2021

1. ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ : ಹರೇಕಳ ಹಾಜಬ್ಬ
2. ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ : ಹುಸೈನ್ ಕಾಟಿಪಳ್ಳ
3. ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ : ಡಾ.ಇ.ಕೆ.ಎ.ಸಿದ್ದೀಕ್ ಅಡ್ಡೂರು

**
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಈ ಕೆಳಗಿನ ಗಣ್ಯರು ಆಯ್ಕೆಯಾಗಿರುತ್ತಾರೆ.

ಗೌರವ ಪುರಸ್ಕಾರ 2021

1. ಬ್ಯಾರಿ ಸಂಗೀತ ಕ್ಷೇತ್ರ – ಅಶ್ರಫ್ ಅಪೋಲೋ
2. ಬ್ಯಾರಿ ಸಂಘಟನೆ ಕ್ಷೇತ್ರ – ಡಾ.ಕೆ.ಎ. ಮುನೀರ್ ಬಾವ
3. ಬ್ಯಾರಿ ಮಹಿಳಾ ಸಾಧಕಿ – ಮರಿಯಮ್ ಫೌಝಿಯ ಬಿಯಸ್.
4. ಬ್ಯಾರಿ ಯುವ ಪ್ರತಿಭೆ – ಬ್ಯಾರಿ ಝುಲ್ಫಿ
5. ಬ್ಯಾರಿ ದಫ್ ಕ್ಷೇತ್ರ – ಮೊಹಮ್ಮದ್ ಬಶೀರ್ ಉಸ್ತಾದ್
6. ಬ್ಯಾರಿ ಬಾಲ ಪ್ರತಿಭೆ – ಮೊಹಮ್ಮದ್ ಫರಾಝ್ ಆ

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search