ಮಂಗಳೂರು: ರೈಲ್ವೆ ಹಳಿಯ ಮೇಲೆ ಬಿದ್ದ ಮಣ್ಣು, ಮುಂದುವರಿದ ಕಾರ್ಯಚರಣೆ!
ಮಂಗಳೂರು:ಕಳೆದ 5 ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರು
ನಗರದ ಕುಲಶೇಖರ ರೈಲ್ವೆ ಟನಲ್ ಬಳಿ ರೈಲು ಹಳಿಗಳ ಮೇಲೆ ಭಾರೀ ಭೂ ಕುಸಿತ ಉಂಟಾಗಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಾಗುವ ತೋಕೂರು ರೈಲ್ವೆ ಮಾರ್ಗ ನಡುವೆ ಕುಲಶೇಖರ ರೈಲ್ವೆ ಟನಲ್ ಬಳಿ ಭಾರೀ ಭೂ ಕುಸಿತ ಉಂಟಾಗಿದೆ. ಈ ಹಿನ್ನಲೆಯಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ. ರೈಲ್ವೆ ಹಳಿಗಳ ಮೇಲಿನಿಂದ ಮಣ್ಣು ತೆರವುಗೊಳಿಸಿ ದುರಸ್ತಿ ಕಾರ್ಯ
ಇಂದು ಕೂಡಾ ಮುಂದುವರಿದಿದೆ, 6 ಜೆಸಿಬಿ ಯಂತ್ರಗಳ ಮೂಲಕ ಮಣ್ಣು ತೆರವು ಮಾಡುವ ಕಾರ್ಯಚರಣೆ ನಡೆಯುತ್ತಿದ್ದು, ರೈಲ್ವೆ ಸಿಬ್ಬಂದಿಗಳು ಭಾರೀ ಮಳೆ ಮಧ್ಯೆ ರೈಲ್ವೆ ಹಳಿಯ ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು. ಸಂಪೂರ್ಣ ಕಾರ್ಯಚರಣೆ ನಡೆಯುವವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಇರುವುದಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 5 ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು,ಇಂದು ಕೂಡಾ ದಕ್ಷಿಣ ಕನ್ನಡ ಜಿಲ್ಲಾದ್ಯಾಂತ ಭಾರೀ ಮಳೆಯಾಗುತ್ತಿದ್ದು ಜುಲೈ19ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
Leave A Reply