• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Tulunadu News Posted On July 19, 2021
0


0
Shares
  • Share On Facebook
  • Tweet It

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ
ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿ ಹಿಂದು ಪತ್ರಿಕೆಯ ಮಂಗಳೂರು ಬ್ಯುರೋ ಮುಖ್ಯಸ್ಥರಾದ ರವಿಪ್ರಸಾದ್ ಕಮಿಲ,ಬೆಸೆಂಟ್ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ.ಕಿಕ್ಕೇರಿ ನೇತೃತ್ವದ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದೆ.

ಜುಲೈ 22ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಶಸ್ತಿ ಪ್ರದಾನ ಮಾಡಲಿರುವರು

ಪರಿಚಯ
ಮೂಲತಃ ಉಡುಪಿ ಜಿಲ್ಲೆಯವರಾದ ಸಂದೀಪ್ ವಾಗ್ಲೆ ಕಳೆದ 17 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕನ್ನಡಪ್ರಭದಲ್ಲಿ ಹಿರಿಯ ವರದಿಗಾರರಾಗಿರುವ ಅವರು ಬಿಎಸ್ಸಿ ಪದವಿ , ಪತ್ರಿಕೋದ್ಯಮದಲ್ಲಿ ಎಂ.ಎ. ಹಾಗೂ ಡಾಕ್ಟರೇಟ್ ಪದವಿಯನ್ನು ಮಂಗಳೂರು ವಿವಿಯಿಂದ ಪಡೆದಿದ್ದಾರೆ. ಈ ಹಿಂದೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search