ರಾತ್ರಿ ನಶೆ ಪಾರ್ಟಿ ನಡೆಸುತ್ತಿದ್ದ ಓನಿಕ್ಸ್ ಪಬ್ ಮೇಲೆ ದಾಳಿ, ಧ್ವನಿವರ್ಧಕಗಳು ಪೋಲಿಸ್ ವಶ
Posted On October 24, 2021
ಮಂಗಳೂರಿನ ಎಂ.ಜಿ ರೋಡ್ ನಲ್ಲಿರುವ ಓನೆಕ್ಸ್ ಪಬ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ನಿನ್ನೆ ತಡ ರಾತ್ರಿ ದಾಳಿ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ. ಅಬಕಾರಿ ಕಾಯ್ದೆ, ಕೆಪಿ ಆಕ್ಟ್ ಮತ್ತು ಎಪಿಡೆಮಿಕ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಪಬ್ ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಓಪನ್ ಇದ್ದು,ಜೋರಾದ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದವರಿಗೆ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು.ಪಬ್ ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ, ತೊಂದರೆಯಾಗುತ್ತಿತ್ತು ಎಂಬ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿತ್ತು.ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
- Advertisement -
Leave A Reply