• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಮಾಡಿದ್ದ ನಾಯಿ “ಲೀನಾ” ಸಾವು!

Tulunadu News Posted On November 22, 2021
0


0
Shares
  • Share On Facebook
  • Tweet It

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ.

ಮಂಗಳೂರು ಏರ್‌ಪೋರ್ಟ್‌ ಆವರಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ಶ್ವಾನ ಮೃತಪಟ್ಟಿದೆ.8 ವರ್ಷದಿಂದ ಸಿಐಎಸ್‌ಎಫ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀನಾ ಹೆಸರಿನ ಲ್ಯಾಬ್ರಡಾರ್ ನಾಯಿ ಕಿಡ್ನಿ ವೈಫಲ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಗೌರವದೊಂದಿಗೆ ಮಂಗಳೂರು ಹಳೇ ಏರ್‌ರ್ಪೋರ್ಟ್ ಆವರಣದಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಲಿನಾಗೆ ಆಹಾರ ಮತ್ತು ಔಷಧಿಗಳ ವೆಚ್ಚದಂತಹ ಎಲ್ಲಾ ಅಗತ್ಯ ಸೌಕರ್ಯಗಳನ್ನು ವಿಮಾನ ನಿಲ್ದಾಣದ ನಿರ್ವಾಹಕರು ಒದಗಿಸಿದ್ದಾರೆ ಎಂದು ಪ್ರಕಟಣೆಯೊಂದರಲ್ಲಿ ತಿಳಿದು ಬಂದಿದೆ. ಲಿನಾ ನಿರಂತರವಾಗಿ ಪಶುವೈದ್ಯರ ನಿಗಾದಲ್ಲಿತ್ತು. ನವೆಂಬರ್ 16 ರಿಂದ ಲಿನಾ ಸಾಮಾನ್ಯ ಆಹಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ ಅದಕ್ಕೆ ಗ್ಲೂಕೋಸ್ ನೀಡಲಾಗುತಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ. ಸ್ಫೋಟಕ ಪತ್ತೆ ಬಗ್ಗೆ ತರಬೇತಿ ಪಡೆದಿದ್ದ ಲೀನಾ ಮಂಗಳೂರು ಏರ್‌ಪೋರ್ಟ್‌ ನಲ್ಲಿ 2020 ರ ಜನವರಿ 20ರಂದು ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿತ್ತು.

ಮಂಗಳೂರಿನ ಸಿಐಎಸ್‌ಎಫ್ ಕಚೇರಿ ಆವರಣದಲ್ಲಿ ಡಿಟೆಕ್ಟಿವ್ ಲೀನಾಗೆ ಅಧಿಕಾರಿಗಳಿಂದ ಅಂತಿಮ ನಮನ ಸಲ್ಲಿಸಲಾಗಿದ್ದು ಸಿಐಎಸ್‌ಎಫ್ ಸಕಲ ಗೌರವದೊಂದಿಗೆ ಮಂಗಳೂರು ಹಳೆ ಏರ್ಪೋರ್ಟ್ ಆವರಣದಲ್ಲಿ ಲೀನಾ ಅಂತ್ಯಕ್ರಿಯೆ ನೆರವೇರಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search