ತಲಪಾಡಿ: ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ!
Posted On December 2, 2021

ಮಂಗಳೂರು ನಗರದ ಹೊರವಲಯದ ತಲಪಾಡಿಯಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತೆಗೆ ಹಾಗೂ ಉಚ್ಚಿಲದಲ್ಲಿ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸಿಸಿಬಿ ಹಾಗೂ ಉಳ್ಳಾಲ ಠಾಣಾ ಇನ್ ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ರಾಝಿಕ್(22) ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ 14ರ ವರ್ಷದ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ ಕಾಲ್ನಡಿಗೆಯ ಮೂಲಕ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಆಕೆಯ ಕೈ ಎಳೆದು ಲೈಂಗಿಕ ಕಿರುಕುಳ ನೀಡಿದ್ದ. ಅಲ್ಲದೇ ಅದೇ ದಿನ ಬೆಳಗ್ಗೆ ಉಚ್ಚಿಲದಲ್ಲಿ ಕಾಲೇಜಿಗೆ ಹೋಗುತ್ತಿದ್ದ 19 ವರ್ಷದ ಯುವತಿಯೊಬ್ಬಳಿಗೆ ಯುವಕನ ಕಿರುಕುಳ ನೀಡಿದ್ದ ಬಗ್ಗೆ ಸಂತ್ರಸ್ತೆ ಪೊಲೀಸ್ ದೂರು ನೀಡಿದ್ದಳು. ಎರಡೂ ದೂರಿನ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
- Advertisement -
Trending Now
ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ
March 15, 2025
ಮಲ್ಟಿಪ್ಲೆಕ್ಸ್ ಟಿಕೆಟ್ ದರ ಗರಿಷ್ಟ 200 ರೂಗೆ ಫಿಕ್ಸ್ ಯಾವಾಗ?
March 14, 2025
Leave A Reply