ತೊಕ್ಕೊಟ್ಟು: ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ!
Posted On December 3, 2021
0
ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮಂಗಳೂರು ನಗರ ಭಾಗದಿಂದ ತೊಕ್ಕೊಟ್ಟು ಬಳಿಯ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ತೆರಳುತ್ತಿದ್ದ ಆಟೋ ರಿಕ್ಷಾ ಚಾಲಕ, ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮೃತರನ್ನು ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ನಸುಕಿನಲ್ಲಿ ವ್ಯಾಪಾರಿಯೋರ್ವರನ್ನ ಕರೆತರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಇತರೇ ಸಾರ್ವಜನಿಕರು ಆಟೋ ಚಾಲಕನಿಗೆ ಶುಶೂಷೆ ನೀಡಿದ್ದಾರೆ. ಚಾಲಕ ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದ ಕೂಡಲೇ ನೇತ್ರಾವತಿ ಸೇತುವೆಯ ಮಧ್ಯೆ ಆಟೋ ಸ್ಥಗಿತಗೊಂಡಿದ್ದು ಚಾಲಕ ಹೃದಯಾಘಾತಕ್ಕೆ ತುತ್ತಾಗಿ ಕುಸಿದು ಬಿದ್ದಿದ್ದಾರೆ.
Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
November 11, 2025









